Breaking News

ಕೊರೊನಾ ವೈರಸ್ ಹೆಚ್ಚಳ : ಕರ್ನಾಟಕದಲ್ಲೂ `ವೀಕೆಂಡ್ ಲಾಕ್ ಡೌನ್’, ರಾತ್ರಿ ಕರ್ಪ್ಯೂ ಇಡೀ ರಾಜ್ಯಕ್ಕೆ ವಿಸ್ತರಣೆ?

Spread the love

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ವಾರಾಂತ್ಯ ಲಾಕ್ ಡೌನ್, ರಾತ್ರಿ ಕರ್ಪ್ಯೂ ವಿಸ್ತರಣೆಯಂಥ ಕ್ರಮಗಳನ್ನು ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಏಪ್ರಿಲ್ 18 ರ ಭಾನುವಾರ ಸಿಎಂ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಸರ್ವಪಕ್ಷಗಳ ನಾಯಕರ ಸಭೆಯಲ್ಲಿ ಚರ್ಚಿಸಿದ ಬಳಿಕ ರಾಜ್ಯದಲ್ಲೂ ವಾರಂತ್ಯದ ಲಾಕ್ ಡೌನ್, ರಾಜ್ಯಾದ್ಯಂತ ರಾತ್ರಿ ಕರ್ಪ್ಯೂ ವಿಸ್ತರಣೆಯಂಥ ಕ್ರಮಗಳನ್ನು ಘೋಷಿಸುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಇನ್ನು ಮಾರುಕಟ್ಟೆ, ಮಾಲ್ ಸೇರಿದಂತೆಹೆಚ್ಚು ಜನರು ಸೇರುವ ಸ್ಥಳಗಳಲ್ಲಿ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಇನ್ನು ರಾಜ್ಯದಲ್ಲಿ ನಿನ್ನೆ ಒಂದೇ ದಿನ 14,738 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದ್ದರೇ, ಕಿಲ್ಲರ್ ಕೊರೋನಾಗೆ 66 ಸೋಂಕಿತರು ಬಲಿಯಾಗಿದ್ದಾರೆ.


Spread the love

About Laxminews 24x7

Check Also

ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ

Spread the loveಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ  ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ