Breaking News

ಬಿಜೆಪಿ ನಾಯಕನ ಮನೆಯಲ್ಲಿ ಪತ್ತೆಯಾಯ್ತಾ ರಾಶಿ ರಾಶಿ ಹಣ? ಫೋಟೋ ಹಿಂದಿನ ಸತ್ಯಾಂಶವೇ ಬೇರೆ!

Spread the love

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಸದ್ಯ ಚುನಾವಣೆ ಭರಾಟೆ ಜೋರಾಗಿದೆ. ಇದರ ನಡುವೆ ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪ ಮತ್ತು ಪೋಸ್ಟ್​ ವಾರ್​ಗಳು ಸಹ ನಡೆಯುತ್ತಿವೆ.

ಇದಕ್ಕೆ ತಾಜಾ ಉದಾಹರಣೆ ಎಂಬಂತೆ ರಾಶಿ ರಾಶಿ ಹಣದ ಕಂತೆಗಳಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಹಣವನ್ನು ಬಂಗಾಳ ಬಿಜೆಪಿ ನಾಯಕರೊಬ್ಬರ ಮನೆಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಕೆಲವು ಪೊಲೀಸರು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡುತ್ತಿರುವುದನ್ನು ಫೋಟೋದಲ್ಲಿ ಕಾಣಬಹುದಾಗಿದೆ.

 

ಅನೇಕ ಫೇಸ್​ಬುಕ್​ ಮತ್ತು ಟ್ವಿಟರ್​ ಬಳಕೆದಾರರು ಫೋಟೋವನ್ನು ಶೇರ್​ ಮಾಡಿಕೊಂಡಿದ್ದು, ಬಂಗಾಳ ಬಿಜೆಪಿ ನಾಯಕನ ಮನೆಯಲ್ಲಿ ಭಾರಿ ಹಣ ವಶಪಡಿಸಿಕೊಳ್ಳಲಾಗಿದೆ. ಅವರು ಬಡವರಿಗೆ ಸಹಾಯ ಮಾಡಲು ಪ್ರಯತ್ನಿಸುತ್ತಿರಬೇಕು ಎಂದು ವ್ಯಂಗ್ಯವಾಡಿದ್ದಾರೆ.

ಆದರೆ, ಈ ಬಗ್ಗೆ ಇಂಡಿಯಾ ಟುಡೆ ಆಯಂಟಿ ಫೇಕ್​ ನ್ಯೂಸ್​ ವಾರ್​ ರೂಮ್​ ನಡೆಸಿದ ಫ್ಯಾಕ್ಟ್​ಚೆಕ್​ನಲ್ಲಿ ಫೋಟೋ ಹಿಂದಿನ ಅಸಲಿ ಸತ್ಯ ಬಯಲಾಗಿದೆ. ಈ ಫೋಟೋವನ್ನು 2019ರಂದು ತೆಗೆಯಲಾಗಿದೆ. ಆವಾಗ ತೆಲಂಗಾಣ ಪೊಲೀಸರು ಖಮ್ಮಮ್​ನಲ್ಲಿ ನಕಲಿ ನೋಟು ಜಾಲವನ್ನು ಭೇದಿಸಿ, ಐವರು ಆರೋಪಿಗಳನ್ನು ಬಂಧಿಸಿದ್ದರು. ಈ ವೇಳೆ 6 ಕೋಟಿ ರೂ. ನಕಲಿ ನೋಟುಗಳನ್ನು ವಶಕ್ಕೆ ಪಡೆದಿದ್ದರು. ಈ ಬಗ್ಗೆ ಎಎನ್​ಐ ಸಹ ಟ್ವೀಟ್​ ಮಾಡಿದೆ. ಆದರೆ, ಬಂಗಾಳದ ಬಿಜೆಪಿ ನಾಯಕರ ಮನೆಯಲ್ಲಿ ಹಣ ವಶಕ್ಕೆ ಪಡೆದಿದ್ದಾರೆಂದು ತಿಳಿಸುವ ಯಾವುದೇ ಇತ್ತೀಚಿನ ವರದಿ ಇಲ್ಲ.

ಗೂಗಲ್​ ರಿವರ್ಸ್​ ಸರ್ಚ್​ ಇಂಜಿನ್​ ಬಳಸಿಕೊಂಡು ವೈರಲ್​ ಫೋಟೋ ಕುರಿತು ನೋಡಿದಾಗ ತೆಲಂಗಾಣ ಟುಡೆ ಎಂಬ ವೆಬ್​ಸೈಟ್​ 2019ರ ನವೆಂಬರ್​ನಲ್ಲಿ ಫೋಟೋ ಕುರಿತಾದ ಸುದ್ದಿಯನ್ನು ಮಾಡಿದೆ. ಇದರ ಪ್ರಕಾರ ಫೋಟೋದಲ್ಲಿರುವ ಹಣ ಖಮ್ಮಮ್​ನಲ್ಲಿ ನಕಲಿ ನೋಟು ಜಾಲ ಭೇದಿಸಿದಾಗ ಪೊಲೀಸರು ತೆಗೆದ ಚಿತ್ರವಾಗಿದೆ.

ಹೀಗಾಗಿ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿರುವ ಫೋಟೋಗೂ ಪಶ್ಚಿಮ ಬಂಗಾಳದ ಬಿಜೆಪಿ ನಾಯಕನಿಗೂ ಸಂಬಂಧವಿಲ್ಲ ಎಂಬುದು ಫ್ಯಾಕ್ಟ್​ಚೆಕ್​ನಿಂದ ತಿಳಿದುಬಂದಿದೆ.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ