Breaking News

ಸಾರಿಗೆ ನೌಕರರಿಗೆ ಸಿಹಿ ಹಂಚಿದ ವಿಜುಗೌಡ

Spread the love

ವಿಜಯಪುರ: ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ ಅವರು ಮುಷ್ಕರ ನಿರತ ಸಾರಿಗೆ ನೌಕರರನ್ನು ಭೇಟಿ, ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದರು.

ಉಪ ಚುನಾವಣೆ ಬಳಿಕ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಸಾರಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಕ್ರಮಕೈಗೊಳ್ಳಲಿದ್ದಾರೆ ಎಂದು ವಿಜುಗೌಡ ಪಾಟೀಲ ಭರವಸೆ ನೀಡಿದರು.

ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿ, ಯುಗಾದಿ ಹಬ್ಬದ ಸಿಹಿಯನ್ನು ವಿತರಿಸಿದರು.

ಚುನಾವಣಾ ಕಾರ್ಯಕ್ಕೆ 224 ಬಸ್‌

ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣಾ ಕಾರ್ಯಕ್ಕೆ ಜಿಲ್ಲೆಯಿಂದ ಗುರುವಾರ 224 ಬಸ್‌ಗಳನ್ನು ಕಳುಹಿಸಿಕೊಡಲಾಯಿತು. ಜಿಲ್ಲೆಯೊಳಗೆ ಸುಮಾರು 104 ಬಸ್‌ಗಳು ಕಾರ್ಯಾಚರಣೆ ನಡೆಸಿವೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಂಘದ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ತಿಳಿಸಿದರು.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ