Home / ರಾಜ್ಯ / 8 ನಗರಗಳಲ್ಲಿ ನೈಟ್ ಕರ್ಫ್ಯೂ ಮುಂದುವರಿಕೆ

8 ನಗರಗಳಲ್ಲಿ ನೈಟ್ ಕರ್ಫ್ಯೂ ಮುಂದುವರಿಕೆ

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮಿತಿಮೀರುತ್ತಿದೆ. ಹಾಗಾಗಿ ಕೋವಿಡ್ ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿಗೆ ತರುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗುತ್ತಿದೆ. ಏಪ್ರಿಲ್ 20ರಂದು ಟಫ್ ರೂಲ್ಸ್ ಜಾರಿ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದರು.

ಕೋವಿಡ್ ಸಲಹಾ ಸಮಿತಿ ತಜ್ಞರ ಜೊತೆ ತುರ್ತು ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈಗ ಜಾರಿಯಲ್ಲಿರುವ 8 ನಗರಗಳ ನೈಟ್ ಕರ್ಫ್ಯೂ ಏಪ್ರಿಲ್ 20ರವರೆಗೂ ಮುಂದುವರೆಯಲಿದೆ. 20ರಂದು ಮತ್ತೊಮ್ಮೆ ಸಭೆ ನಡೆಸಿ ಮುಂದೆ ಕೈಗೊಳ್ಳಬೇಕಾದ ನಿಯಮಗಳ ಬಗ್ಗೆ ನಿರ್ಧರಿಸಲಾಗುವುದು ಎಂದರು.

ದೆಹಲಿ, ಮಹಾರಾಷ್ಟ್ರದಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ, ಲಾಕ್ ಡೌನ್ ಜಾರಿ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ, ಕರ್ನಾಟಕವನ್ನು ಬೇರೆ ರಾಜ್ಯಗಳಿಗೆ ಹೋಲಿಸುವುದು ಬೇಡ. ನಮ್ಮ ರಾಜ್ಯದಲ್ಲಿನ ಸ್ಥಿತಿಗತಿ ಬೇರೆ ರಾಜ್ಯಗಳಿಗಿಂತ ವಿಭಿನ್ನವಾಗಿದೆ. ಇಲ್ಲಿನ ಪರಿಸ್ಥಿತಿ ನೋಡಿಕೊಂಡು ಕ್ರಮಕೈಗೊಳ್ಳಬೇಕಾಗುತ್ತದೆ ಎಂದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ