Breaking News

ಲಾಕ್ ಡೌನ್ ಇಲ್ಲ ಆದರೆ ಕಠಿಣ ನಿಯಮ ಜಾರಿ :ಆರ್.ಅಶೋಕ್

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೊರೊನಾ ನಿಯಂತ್ರಣಕ್ಕೆ ಕಠಿಣ ನಿಯಮಗಳನ್ನು ಜಾರಿ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸಚಿವರ ಸಭೆ ಬಳಿಕ ಅಮತನಾಡಿದ ಅವರು, ಲಾಕ್ ಡೌನ್ ಜಾರಿ ಪ್ರಶೆ ಇಲ್ಲ. ಆದರೆ ಟಫ್ ರೂಲ್ಸ್ ಜಾರಿ ಮಾಡಲಾಗುವುದು. ಅದರಲ್ಲೂ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕಠಿಣ ನಿಯಮ ಜಾರಿ ಅಗತ್ಯವಿದೆ. ಬಡವರಿಗೆ ತೊಂದರೆಯಾಗದಂತೆ ನಿಯಮ ಜಾರಿ ತರಲಾಗುತ್ತದೆ ಎಂದರು.

ನಾಳೆ ಸರ್ವಪಕ್ಷ ಸಭೆ ನಡೆಯಲಿದ್ದು, ಅದಕ್ಕೆ ಪೂರಕವಾಗಿ ಇಂದು ಸಚಿವರ ಸಭೆ ನಡೆದಿದೆ. ಸಭೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ನಾಳಿನ ಸಭೆಯಲ್ಲಿಯೂ ಈ ಬಗ್ಗೆ ಚರ್ಚಿಸಿ, ಎಲ್ಲಾ ಪಕ್ಷಗಳ ನಾಯಕರ ಅಭಿಪ್ರಾಯ ಸಂಗ್ರಹಿಸಿ ಸಿಎಂ ಗೆ ತಿಳಿಸುತ್ತೇವೆ. ಮಂಗಳವಾರ ಮುಖ್ಯಮಂತ್ರಿಗಳು ಕಠಿನ ನಿಯಮದ ಬಗ್ಗೆ ಆದೇಶ ಹೊರಡಿಸಲಿದ್ದಾರೆ ಎಂದು ಹೇಳಿದರು.


Spread the love

About Laxminews 24x7

Check Also

ಶಾಲಾ ಮಕ್ಕಳ ಆತ್ಮಹತ್ಯೆ ತಡೆಗೆ ನೀತಿ ಜಾರಿ – ಮಹದೇವಪ್ಪ

Spread the loveಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆ, ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 27 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ