Breaking News

ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಪ್ತ ಸಹಾಯಕ ಕೋವಿಡ್‌ಗೆ ಬಲಿ

Spread the love

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕಮಾರ್‌ ಅವರ ಆಪ್ತ ಸಹಾಯಕ ಎಚ್‌.ಜೆ. ರಮೇಶ್‌ ಅವರು ಕೋವಿಡ್‌ಗೆ ಸೋಮವಾರ ಬೆಳಿಗ್ಗೆ ಬಲಿಯಾಗಿದ್ದಾರೆ.

ರಮೇಶ್‌ ಅವರಿಗೆ ಏ. 13ರಂದು ಕೋವಿಡ್‌ ದೃಢಪಟ್ಟಿತ್ತು. ಅವರನ್ನು ಸೇಂಟ್‌ ಜಾನ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಕಾರಣ, ಸೋಮವಾರ ಬೆಳಿಗ್ಗೆ 9.30ಕ್ಕೆ ಸಾವನ್ನಪ್ಪಿದ್ದಾರೆ.

‘ರಮೇಶ್‌ ಅವರು ಸಚಿವರ ಮನೆಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ರಮೇಶ್‌ ಅವರಿಗೆ ಉಸಿರಾಟ ಸಮಸ್ಯೆ ಎದುರಾದಾಗ, ತಕ್ಷಣ ಅಗತ್ಯ ಪ್ರಮಾಣದಲ್ಲಿ ಆಕ್ಸಿಜನ್‌ ಸಿಗಲಿಲ್ಲ. ಆಕ್ಸಿಜನ್‌ ಕೊರತೆಯಿಂದ ಸಾವು ಸಂಭವಿಸಿದೆ. ಸಚಿವರ ಆಪ್ತ ಸಹಾಯಕರಿಗೇ ಆಕ್ಸಿಜನ್‌ ಸಿಗಲಿಲ್ಲ ಎಂದ ಮೇಲೆ ಜನಸಾಮಾನ್ಯರ ಸ್ಥಿತಿ ಏನು’ ಎಂದು ರಮೇಶ್‌ ಅವರ ಒಡನಾಡಿಯೊಬ್ಬರು ತಿಳಿಸಿದರು.

ರಮೇಶ್‌ ಸಾವಿನ ಬಗ್ಗೆ ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸುರೇಶ್‌ಕುಮಾರ್‌, ‘ನಮ್ಮ ಕ್ಷೇತ್ರದ (ರಾಜಾಜಿನಗರ) ಅನೇಕರನ್ನು ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಉಳಿಸಿದ್ದ, ನನ್ನ ಆಪ್ತ ಸಹಾಯಕ ಎಚ್‌.ಜೆ. ರಮೇಶ್ ಇನ್ನಿಲ್ಲ. ರಮೇಶ್ ಸುಮಾರು ಎಂಟು ವರ್ಷ ನನ್ನೊಡನೆ ನಗು ನಗುತ್ತಾ ಸೇವೆ ಸಲ್ಲಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರಕಲಿ’ಎಂದಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ