ವಿಜಯಪುರ: ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹಿಸಿ ಜಿಲ್ಲೆಯಲ್ಲಿ ಮುಷ್ಕರ ನಿರತ ನೌಕರರ ಪೈಕಿ ಸೋಮವಾರ 21 ಸಿಬ್ಬಂದಿಯನ್ನು ಸೇವೆಯಿಂದ ಅಮಾನತ್ತು ಮಾಡಲಾಗಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ತಿಳಿಸಿದ್ದಾರೆ.
ಕರ್ತವ್ಯಕ್ಕೆ ಗೈರುಹಾಜರು ಆಗಿರುವುದು ಮತ್ತು ಕರ್ತವ್ಯಕ್ಕೆ ಬರುವವರಿಗೆ ತೊಂದರೆ ಮಾಡಿ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ ಎಂಬ ಆರೋಪದ ಮೇರೆಗೆ ಅಮಾನತು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಮುದ್ದೇಬಿಃಆಳ ಘಟಕದ 21 ಮತ್ತು ತಾಳಿಕೋಟೆ ವಿಭಾಗದ ಇಬ್ಬರು ಸೇರಿದಂತೆ 23 ಜನ ಚಾಲಕ, ನಿರ್ವಾಹಕರನ್ನು ಬೇರೆ ಬೇರೆ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸೋಮವಾರ 111 ಬಸ್‌ಗಳು ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿವೆ. ಬೇರೆ ವಿಭಾಗಗಳಿಂದ ಸಹ ಬಸ್‌ಗಳು ಜಿಲ್ಲೆಗೆ ಬಂದಿದ್ದರಿಂದ, ಖಾಸಗಿ ವಾಹನಗಳು ಬಸ್ ನಿಲ್ದಾಣದ ಪ್ರವೇಶಿಸದಂತೆ ಕ್ರಮಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
‘ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು. ಇಲ್ಲವಾದರೆ ಕಠಿಣ ಕ್ರಮಕೈಗೊಳ್ಳಲಾಗುವುದು’ ಎಂದು ಕುರುಬರ ಎಚ್ಚರಿಕೆ ನೀಡಿದ್ದಾರೆ.
Laxmi News 24×7