Breaking News

ಮೇ 1ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಲಸಿಕೆ ಪಡೆಯಬಹುದು

Spread the love

ನವದೆಹಲಿ, ಏಪ್ರಿಲ್ 19: ದೇಶದಲ್ಲಿ ಮೂರನೇ ಹಂತದ ಕೊರೊನಾ ಲಸಿಕಾ ಅಭಿಯಾನವು ಮೇ 1ರಿಂದ ಆರಂಭಗೊಳ್ಳಲಿದ್ದು, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಲಸಿಕೆ ಪಡೆಯಲು ಅರ್ಹ ಎಂದು ಕೇಂದ್ರ ಸರ್ಕಾರ ಸೋಮವಾರ ಪ್ರಕಟಿಸಿದೆ.

ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ದೇಶದಲ್ಲಿ ಒಂದು ವರ್ಷದಿಂದಲೂ ಕೊರೊನಾ ಲಸಿಕೆ ಅಭಿವೃದ್ಧಿಯಲ್ಲಿ ಭಾರತ ಸರ್ಕಾರ ಪರಿಶ್ರಮ ಪಡುತ್ತಿದೆ. ಅತಿ ಕಡಿಮೆ ಅವಧಿಯಲ್ಲಿ ಹೆಚ್ಚೆಚ್ಚು ಭಾರತೀಯರು ಲಸಿಕೆ ಪಡೆಯಬೇಕೆಂಬುದು ನಮ್ಮ ಆಶಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಲಸಿಕೆ ವಿತರಣೆ ಕುರಿತು ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಕೊರೊನಾ ಲಸಿಕೆಯ ಬೆಲೆ, ಲಸಿಕೆ ಪಡೆಯಲು ಅರ್ಹತೆ, ಲಭ್ಯತೆಯನ್ನು ಲಸಿಕಾ ಅಭಿಯಾನದ ಮೂರನೇ ಹಂತದಲ್ಲಿ ಇನ್ನಷ್ಟು ಸರಾಗಗೊಳಿಸಲಾಗಿದೆ. ಸ್ಥಳೀಯ ಬೇಡಿಕೆಗಳಿಗೆ ತಕ್ಕಂತೆ ಲಸಿಕಾ ಉತ್ಪಾದಕರಿಗೆ ಲಸಿಕೆ ಪೂರೈಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಬಹುಮುಖ್ಯವಾಗಿ, 18 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಲು ಅರ್ಹರಾಗಿದ್ದಾರೆ ಎಂದು ಹೇಳಲಾಗಿದೆ.

ಲಸಿಕಾ ಉತ್ಪಾದಕರಿಗೆ, ಲಸಿಕೆಗಳ ಉತ್ಪಾದನೆಯನ್ನು ಹೆಚ್ಚಿಸಲು ಸೂಚಿಸಲಾಗಿದೆ. ಲಸಿಕೆ ಉತ್ಪಾದಕರು ರಾಜ್ಯ ಸರ್ಕಾರಗಳಿಗೆ 50% ಲಸಿಕೆಗಳನ್ನು ಸರಬರಾಜು ಮಾಡಬಹುದಾಗಿದೆ. ರಾಜ್ಯಗಳು ನೇರವಾಗಿ ಉತ್ಪಾದಕರಿಂದಲೇ ಲಸಿಕೆ ಪಡೆದುಕೊಳ್ಳಬಹುದಾಗಿದೆ ಎನ್ನಲಾಗಿದೆ.

ಈ ಹಿಂದಿನಂತೆಯೇ ಲಸಿಕೆ ನೀಡುವ ಪ್ರಕ್ರಿಯೆಯು ಮುಂದುವರೆಯಲಿದೆ. ಅಗತ್ಯವಿದ್ದ ಕಡೆ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ತಿಳಿದುಬಂದಿದೆ.

ಭಾರತದಲ್ಲಿ ಜನವರಿ 16ರಿಂದ ಲಸಿಕಾ ಅಭಿಯಾನ ಆರಂಭವಾಗಿದ್ದು, ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿತ್ತು. ಎರಡನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಹಾಗೂ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ಇದೀಗ ಮೂರನೇ ಹಂತದಲ್ಲಿ 18 ವಯಸ್ಸು ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಸೂಚಿಸಲಾಗಿದೆ.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ