Breaking News

ಆಕ್ಸಿಜನ್ ಮತ್ತು ರೆಮಿಡಿಸಿವಿರ್ ಪೂರೈಕೆಗೆ 24/7 ವಾರ್ ರೂಮ್ ಸ್ಥಾಪನೆ : ಡಾ. ಸುಧಾಕರ್

Spread the love

ಬೆಂಗಳೂರು : ಕೋವಿಡ್ ರೂಪಾಂತರಿ ಅಲೆ ರಾಜ್ಯದಲ್ಲಿ ನಿತ್ಯ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಿನ್ನೆ(ಮಂಗಳವಾರ, ಏಪ್ರಿಲ್ 20) ರಾತ್ರಿ ವೀಕೆಂಡ್ ಲಾಕ್ ಡೌನ್, ವಾರದ ಐದು ದಿನಗಳ ನೈಟ್ ಕರ್ಫ್ಯೂ ಘೋಷಣೆ ಮಾಡಿ ಕೆಲವು ಕಠಿಣ ನಿರ್ಬಂಧಗಳನ್ನು ಹೇರಿದೆ.

ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎರಡು ವಾರಗಳ ಭಾಗಶಃ ಲಾಕ್ ಡೌ ನ್ ರಾಜ್ಯದಲ್ಲಿರಲಿದೆ.

ಕೋವಿಡ್ ಸೋಂಕಿನ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದರ ಜೊತೆಗೆ ರಾಜ್ಯದಲ್ಲಿ ಕೋವಿಡ್ ನಿಂದ ಮೃತಪಡುತ್ತಿರುವರ ಸಂಖ್ಯೆಯೂ ಏರಿಕೆಯಾಗುತ್ತಿದ್ದು, ಆಮ್ಲಜನಕದ ಕೊರತೆಯೇ ಕಾರಣ ಎಂದು ಪ್ರತಿ ಪಕ್ಷಗಳು ಆಡಳತ ಪಕ್ಷವನ್ನು ಆರೋಫ ಮಾಡುತ್ತಿವೆ.

 

ಇನ್ನೊಂದೆಡೆ ಆಡಳಿತ ಪಕ್ಷ ತನ್ನನ್ನು ಸಮರ್ಥಿಸಿಕೊಳ್ಳುತ್ತಾ, ಕೋವಿಡ್ ನಿಯಂತ್ರಣಕ್ಕೆ ಬೇಕಾದ ಎಲ್ಲಾ ಸೌಲಭ‍್ಯಗಳು ಇವೆ, ಹೆಚ್ಚುವರಿ ತುರ್ತ ಅಗತ್ಯತೆಗಳನ್ನು ಪೂರೈಸಲಾಗುತ್ತಿದೆ ಎಂದು ಹೇಳುತ್ತಿದೆ.

ಈ ವಿಚಾರಕ್ಕೆ ಪೂರಕವಾಗುವಂತೆ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಇಂದು(ಬುಧವಾರ, ಏ. 21) ತಮ್ಮ ಟ್ವೀಟರ್ ನಲ್ಲಿ ಆಕ್ಸಿಜನ್ ಮತ್ತು ರೆಮಿಡಿಸಿವಿರ್ ಪೂರೈಕೆಗೆ 24/7 ವಾರ್ ರೂಮ್ ಸ್ಥಾಪಿಸಲಾಗಿದ್ದು, ಸಿಬ್ಬಂದಿಗಳು 3 ಪಾಳಿಗಳಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಬರೆದುಕೊಂಡಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ