Breaking News
Home / ರಾಜ್ಯ / 24 ಗಂಟೆಯೊಳಗೆ ‘RTPCR’ ಪರೀಕ್ಷಾ ಫಲಿತಾಂಶ ವರದಿ ನೀಡುವಂತೆ ಸೂಚಿಸಿ ರಾಜ್ಯ ಸರ್ಕಾರದಿಂದ ಆದೇಶ

24 ಗಂಟೆಯೊಳಗೆ ‘RTPCR’ ಪರೀಕ್ಷಾ ಫಲಿತಾಂಶ ವರದಿ ನೀಡುವಂತೆ ಸೂಚಿಸಿ ರಾಜ್ಯ ಸರ್ಕಾರದಿಂದ ಆದೇಶ

Spread the love

ಬೆಂಗಳೂರು : ಕೋವಿಡ್ 19 ಸೋಂಕು ಪತ್ತೆ ಹಚ್ಚಲು RT-PCR ಪರೀಕ್ಷೆಗಾಗಿ ಸರ್ಕಾರದಿಂದ ಕಳುಹಿಸಲಾದ ಮಾದರಿಗಳ ಪರೀಕ್ಷಾ ಫಲಿತಾಂಶವನ್ನು 24 ಗಂಟೆಯೊಳಗೆ ನೀಡುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್ 19 2 ನೇ ಅಲೆಯ ಸೋಂಕು ವ್ಯಾಪಕವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆ ಸೋಂಕು ಪತ್ತೆ ಹಚ್ಚಲು RT-PCR ಪರೀಕ್ಷೆಗಾಗಿ ಮಾದರಿ ಸಂಗ್ರಹಿಸಿದ ಬಳಿಕ ಪರೀಕ್ಷಾ ಫಲಿತಾಂಶವನ್ನು 24 ಗಂಟೆಯೊಳಗೆ ಪ್ರಕಟಿಸಲು ಉಚ್ಚ ನ್ಯಾಯಾಲಯ ಸರ್ಕಾರಕ್ಕೆ ಸೂಚನೆ ನೀಡಿರುತ್ತದೆ, ಆದ್ದರಿಂದ RT-PCR ಪರೀಕ್ಷೆಯ ಫಲಿತಾಂಶವನ್ನು 24 ಗಂಟೆಯೊಳಗೆ ನೀಡುವುದರ ಜೊತೆಗೆ ಸದರಿ ಮಾಹಿತಿಯನ್ನು ICMR PORTAL ನಲ್ಲಿ ನಮೂದಿಸುವಂತೆ ಸೂಚಿಸಿ ಆದೇಶ ಹೊರಡಿಸಲಾಗಿದೆ.


Spread the love

About Laxminews 24x7

Check Also

ಮಹಿಳೆ ಅಪಹರಣ ಕೇಸ್: ಎಸ್‌ಐಟಿ ಪೊಲೀಸರಿಂದ ‘ಭವಾನಿ ರೇವಣ್ಣ ಕಾರು ಚಾಲಕ’ನಿಗೆ ಸಮನ್ಸ್ ಜಾರಿ

Spread the loveಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸಲ್ಲಿ ಜೈಲು ಸೇರಿ, ಮಾಜಿ ಸಚಿವ ಹೆಚ್.ಡಿ ರೇವಣ್ಣ ಜಾಮೀನಿನ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ