Breaking News

ರಾಜ್ಯ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ಮತ್ತೆ ಅಕ್ಕಿ ಪ್ರಮಾಣ ಕಡಿತ

Spread the love

ಬೆಂಗಳೂರು : ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಮತ್ತೊಂದು ಬಿಗ್ ಶಾಕ್ ನೀಡಿದ್ದು, ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್ ದಾರರಿಗೆ ವಿತರಿಸುತ್ತಿರುವ ಅಕ್ಕಿಪ್ರಮಾಣವನ್ನು ರಾಜ್ಯ ಸರ್ಕಾರ ಮತ್ತೆ ಕಡಿತಗೊಳಿಸಿದೆ.

ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಪ್ರತಿ ಸದಸ್ಯನಿಗೆ ಈ ಹಿಂದೆ 5 ಕೆಜಿ ಅಕ್ಕಿ, 2 ಕೆಜಿ ಗೋಧಿ ವಿತರಿಸಲಾಗುತ್ತಿತ್ತು. ಹೊಸ ಪದ್ಧತಿಯಲ್ಲಿ ಈ ತಿಂಗಳಿನಿಂದ 2 ಕೆಜಿ ಅಕ್ಕಿ, 3 ಕೆಜಿ ರಾಗಿ ಹಾಗೂ 2 ಕೆಜಿ ಗೋಧಿ ನೀಡಲು ನಿರ್ಧರಿಸಲಾಗಿದೆ.

ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿಗೆ 15 ಕೆಜಿ ಅಕ್ಕಿ, 20 ಕೆಜಿ ರಾಗಿ ನೀಡಲು ನಿರ್ಧರಿಸಲಾಗಿದೆ. ಈ ಮೂಲಕ ಕೊರೊನಾ ಸಂಕಷ್ಟ ಕಾಲದಲ್ಲಿ ಅಕ್ಕಿ ಪ್ರಮಾಣ ಕಡಿತಗೊಳಿಸಿರುವುದು ಕಾರ್ಡ್ ದಾರರಿಂದ ಆಕ್ಷೇಪ ವ್ಯಕ್ತವಾಗಿದೆ.

ಇನ್ನು ರಾಗಿ, ಜೋಳ ಬೆಳೆಯುವ ಕರ್ನಾಟಕದ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಪಡಿತರ ಚೀಟಿದಾರರಿಗೆ ಅಕ್ಕಿ ಕಡಿತ ಮಾಡಿ ರಾಗಿ, ಜೋಳ ನೀಡಲು ನಿರ್ಧಾರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ