Breaking News

ಕೋವಿಡ್‌ ಸಂಕಷ್ಟದಲ್ಲಿದ್ದರೂ ಸರ್ಕಾರ ಪ್ರಧಾನಿ ಮೋದಿಯ ಪ್ರಚಾರದಲ್ಲಿ ನಿರತವಾಗಿದೆ :H.D.K.

Spread the love

ಕರೋನಾ ವಿಚಾರ ಹಿನ್ನಲೆ, ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ರಾಜ್ಯ ಹಾಗು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವೈರಸ್‌ ಹೊಡೆತಕ್ಕೆ ರಾಷ್ಟ್ರವೇ ತತ್ತರಿಸಿದೆ. ಜನ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸೂತಕದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಎಲ್ಲ ಪತ್ರಿಕೆಗಳ ಮುಖಪುಟದಲ್ಲಿ ಪ್ರಧಾನಿ ನಗುಮೊಗದ ಜಾಹೀರಾತೊಂದನ್ನು ನೀಡಿದೆ. ಈ ಮೂಲಕ ಜನರ ನೋವನ್ನು ಗೇಲಿ ಮಾಡಿದೆ. ಇದು ನಿಜಕ್ಕೂ ಆತ್ಮಸಾಕ್ಷಿಯ ನಡೆಯಲ್ಲ ಎಂದು ಕಿಡಿಕಾರಿದ್ದಾರೆ.

ಮೆಟ್ರೋ 2ನೇ ಹಂತದ ಯೋಜನೆಗಳಿಗೆ ಕೇಂದ್ರ ಅನುದಾನ ನೀಡಿದ್ದನ್ನೇ ನೆಪ ಮಾಡಿಕೊಂಡು ಸರ್ಕಾರ ಪ್ರಚಾರಕ್ಕೆ ಧುಮುಕಿದೆ. ರಾಜ್ಯಕ್ಕೆ ಕೇಂದ್ರ ನೀಡುವ ಅನುದಾನವೇನು ಭಿಕ್ಷೆಯಲ್ಲ. ಅದು ನಮ್ಮ ಹಕ್ಕು. ಅದರಲ್ಲಿ ಪ್ರಚಾರ ಪಡೆಯುವ, ಜಾಹೀರಾತು ನೀಡುವ ತುರ್ತು ಏನಿದೆ ಎಂಬುದನ್ನು ಸರ್ಕಾರ ಪರಾಮರ್ಶೆ ಮಾಡಬೇಕಿತ್ತು. ಇದು ಸರ್ಕಾರದ ಹೊಣೆಗೇಡಿತನ ಎಂದು ದೂರಿದ್ದಾರೆ.

 

ಸಮಾಜವೇ ಗಂಡಾಂತರದಲ್ಲಿ ಸಿಲುಕಿರುವಾಗ ಈ ಪ್ರಚಾರ ಪ್ರಿಯತೆ ಏಕೆ? ಜಾಹೀರಾತುಗಳಲ್ಲಿ ನೀವು ಬೀರುವ ನಗು ನೋವಿನಲ್ಲಿರುವವರನ್ನು ಅಣಕಿಸುತ್ತದೆ ಎಂಬ ಸೂಕ್ಷ್ಮತೆ ಇಲ್ಲವೇ? ಜಾಹೀರಾತುಗಳಿಗೆ ನೀಡುವ ಹಣವನ್ನು ವೈದ್ಯಕೀಯ ವ್ಯವಸ್ಥೆಗೆ ಬಳಸಿಕೊಂಡಿದ್ದಿದ್ದರೆ ಯಾರಾದರೂ ಬೇಡವೆನ್ನುತ್ತಿದ್ದರೆ ? ಸರ್ಕಾರದ ಪ್ರಚಾರದ ಈ ಹುಚ್ಚು ನಾಚಿಕೆಗೇಡಿನದ್ದು ಎಂದಿದ್ದಾರೆ.

ಸರ್ಕಾರ ಕೋವಿಡ್‌ ಅನ್ನು ನಿಭಾಯಿಸಿದ ರೀತಿ ಮತ್ತು ಅದರಲ್ಲಿ ನಡೆದಿರಬಹುದಾದ ಭ್ರಷ್ಟಾಚಾರದ ಬಗ್ಗೆ ಆರೋಪಗಳು ಬಂದವು. ಆದರೆ, ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಸರ್ಕಾರ ನೈತಿಕತೆ ಪ್ರಶ್ನೆ ಎದುರಿಸಬಾರದು ಎಂಬ ಕಾರಣಕ್ಕೆ ನಾವೆಲ್ಲರೂ ಸುಮ್ಮನಿದ್ದೆವು. ಆದರೆ, ಕಣ್ಣ ಮುಂದಿನ ಇಂಥ ಬೇಜವಾಬ್ದಾರಿತನ, ಪ್ರಚಾರಪ್ರಿಯತೆಯನ್ನು ಸಹಿಸಲಾಗದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ