Breaking News

ಕೊರೊನಾ ನಿರ್ವಹಣೆಗೆ ರಾಜ್ಯ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ, ಸೂಕ್ತ ಯೋಜನೆಯೂ ಇಲ್ಲ: ಸತೀಶ ಜಾರಕಿಹೊಳಿ

Spread the love

ಬೆಳಗಾವಿ: ಕೊರೊನಾ ನಿರ್ವಹಣೆಗೆ ರಾಜ್ಯ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ, ಸೂಕ್ತ ಯೋಜನೆಯೂ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಎರಡನೇ ಅಲೆ ಹರಡುವ ಬಗ್ಗೆ ತಜ್ಞರು ಮೊದಲೇ ತಿಳಿಸಿದ್ದರು. ಹೀಗಾಗಿ, ಸರ್ಕಾರ ಆಸ್ಪತ್ರೆಗಳ ತಯಾರಿ, ಬೆಡ್ ಗಳ ವ್ಯವಸ್ಥೆ, ಆಕ್ಸಿಜನ್ ಸಿಲಿಂಡರ್ ಹಾಗೂ ಔಷಧಿಗಳ ಸಂಗ್ರಹಣೆ ಸೇರಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಸರ್ಕಾರದ ನಿರ್ಲಕ್ಷ್ಯದಿಂದ ಈಗ ಜನರಿಗೆ ಸಮಸ್ಯೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಅವಶ್ಯಕತೆ ಇಲ್ಲ. ಮೊದಲೇ ನೈಟ್ ಕರ್ಪ್ಯೂ ಜೊತೆಗೆ, ಹಗಲು ಹೊತ್ತಿನಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದರೇ ಕೊರೊನಾ ನಿಯಂತ್ರಣಕ್ಕೆ ಬರುತ್ತಿತ್ತು. ಕೆಲವು ಕಡೆ ಈಗ ಪರಿಸ್ಥಿತಿ ಕೈ ಮೀರಿ ಹೋಗುತ್ತಿದೆ” ಎಂದು ಹೇಳಿದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ