Breaking News

ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಲು ಮನವಿ ಮಾಡಿದ ಶಶಿಕಲಾ ಜೊಲ್ಲೆ

Spread the love

ವಿಜಯಪುರ: ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ, ಕೋವಿಡ್‌ನಿಂದ ರಕ್ಷಿಸಿಕೊಳ್ಳಲು ತಪ್ಪದೇ ಮಾಸ್ಕ್‌ ಧರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.

ನಗರದ ಗಾಂಧಿ ವೃತ್ತ, ಸಿದ್ಧೇಶ್ವರ ದೇವಸ್ಥಾನ ಮಾರ್ಗದಲ್ಲಿ ಬಿಸಿಲನ್ನು ಲೆಕ್ಕಿಸದೆ ಮಾಸ್ಕ್‌ ಧರಿಸುವ ಕುರಿತು ಜನ ಜಾಗೃತಿ ಮೂಡಿಸಿದರು.

ಮಹಿಳೆಯರು, ಮಕ್ಕಳು ಹಾಗೂ ವೃದ್ಧರಿಗೆ ಗುಲಾಬಿ ಹೂವು ಹಾಗೂ ಮಾಸ್ಕ್‌ ನೀಡಿ, ತಮ್ಮ ಹಾಗೂ ಕುಟುಂಬದ ಸುರಕ್ಷತೆಗಾಗಿ ಮಾಸ್ಕ ಧರಿಸಲು ಮನವಿ ಮಾಡಿದ್ದು, ಜೊತೆಗೆ ಮಹಿಳೆಯರು ವಿಶೇಷವಾಗಿ ತಮ್ಮ ಹಾಗೂ ಚಿಕ್ಕ ಮಕ್ಕಳ ಸುರಕ್ಷತೆ ಬಗ್ಗೆ ಕಾಳಜಿವಹಿಸಲು ಸಲಹೆ ನೀಡಿದರು.

ಅಂಗಡಿ, ಮಳಿಗೆಗಳಿಗೆ ತೆರಳಿ ವ್ಯಾಪಾರಿಗಳಲ್ಲಿಯೂ ಅರಿವು ಮೂಡಿಸಿ, ಸರ್ಕಾರದ ಮಾರ್ಗಸೂಚಿ ತಪ್ಪದೇ ಪಾಲಿಸಲು ತಿಳಿ ಹೇಳಿದರು.

ಈ ಸಂದರ್ಭ, ಕರ್ನಾಟಕ ರಾಜ್ಯ ಬೀಜ ಹಾಗೂ ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ