Breaking News

ನಾಳೆ ರಾಜ್ಯಾಧ್ಯಂತ ‘ವೀಕ್ ಎಂಡ್ ಕರ್ಪ್ಯೂ’ ಹಿನ್ನಲೆ : ‘KSRTC, BMTC ಬಸ್ ಸಂಚಾರ’ ಇರುತ್ತೋ.? ಇಲ್ಲವೋ.? ಇಲ್ಲಿದೆ ಮಾಹಿತಿ.!

Spread the love

ಬೆಂಗಳೂರು : ನಾಳೆ ರಾಜ್ಯಾಧ್ಯಂಕ ಕೊರೋನಾ ಸೋಂಕಿನ ನಿಯಂತ್ರವಾಗಿ ವೀಕ್ ಎಂಡ್ ಕರ್ಪ್ಯೂ ಜಾರಿಯಲ್ಲಿರಲಿದೆ. ಇಂದು ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಯಲ್ಲಿ ಇರಲಿದ್ದು, ಮನೆಯಿಂದ ಅನಗತ್ಯವಾಗಿ ಹೊರ ಬರೋರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಸಿದ್ಧತೆ ಕೂಡ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಅಗತ್ಯ ಸೇವೆ ಒದಗಿಸುವಂತೆ ಕೆ ಎಸ್ ಆರ್ ಟಿ ಸಿ ಹಾಗೂ ಬಿಎಂಟಿಸಿ ಬಸ್ ಸಂಚಾರಕ್ಕೆ ರಾಜ್ಯ ಸರ್ಕಾರ ಅನುಮತಿಸಿದೆ. ಹೀಗಾಗಿ ನಾಳಿನ ವೀಕ್ ಎಂಡ್ ಕರ್ಪ್ಯೂ ನಡುವೆಯೂ ಕೆ ಎಸ್ ಆರ್ ಟಿ ಸಿ ಹಾಗೂ ಬಿಎಂಟಿಸಿ ಬಸ್ ಸಂಚಾರ್ ಅಗತ್ಯತೆಗೆ ಅನುಗುಣವಾಗಿ ಇರಲಿದೆ ಎಂಬುದಾಗಿ ಪ್ರಕಟಣೆಯಲ್ಲಿ ತಿಳಿಸಿವೆ.

ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯ ವ್ಯವಸ್ಥಾಪಕ ನಿರ್ದೇಶಕರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟಲು ಕರ್ನಾಟಕ ಸರ್ಕಾರವು ವಾರಾಂತ್ಯದಲ್ಲಿ ಅಂದರೆ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ಕರ್ಪ್ಯೂ ಜಾರಿಗೊಳಿಸಿರುತ್ತದೆ.

ಈ ಅವಧಿಯಲ್ಲಿ ಕೆ ಎಸ್ ಆರ್ ಟಿ ಸಿ ನಿಗಮದ ಬಸ್ಸುಗಳ ಕಾರ್ಯಾಚರಣೆ ಇದ್ದು, ಪ್ರಯಾಣಿಕರ ದಟ್ಟಣೆ ಮತ್ತು ಅವಶ್ಯಕತೆ ಅನುಗುಣವಾಗಿ ಮಾತ್ರ ಸಾರಿಗೆಗಳನ್ನು ಕಾರ್ಯಾಚರರಿಸಲಾಗುವುದು. ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದ್ದಾರೆ.

ಮತ್ತೊಂದೆಡೆ.. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿನ ಬೆಂಗಳೂರು ನಗರ ಹೊರವಲಯ ಪ್ರದೇಶಗಳಲ್ಲಿ ಕೊರೋನಾ ವೈರಾಣು ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹಾಗೂ ಹತೋಟಿಗೆ ತರಲು ವಾರಾಂತ್ಯ ಕರ್ಪ್ಯೂ ಘೋಷಿಸಲಾಗಿದೆ.

ಈ ಹಿನ್ನಲೆಯಲ್ಲಿ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯ ಸರ್ಕಾರದ ಆದೇಶದ ಮಾರ್ಗಸೂಚಿಯಂತೆ ಅನುಮತಿಸಲಾದ ಚಟುವಟಿಕೆಗಳಿಗೆ ಅಗತ್ಯ ಸಾರಿಗೆ ಸೇವೆಗಳ್ನು ಒದಗಿಸುವ ನಿಟ್ಟಿನಲ್ಲಿ, ನಿಷೇಧಿತವಲ್ಲದ ಕೈಗಾರಿಕೆಗಳು ಮತ್ತು ಸರ್ಕಾರಿ ಕಚೇರಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಅನುಕೂಲಕ್ಕಾಗಿ 450-500 ಅಗತ್ಯ ಸಾಮಾನ್ಯ ಸಾರಿಗೆ ಸೇವೆಗಳನ್ನು ಕಾರ್ಯಾಚರಿಸಲಾಗುವುದು ಎಂಬುದಾಗಿ ತಿಳಿಸಿದೆ.

 


Spread the love

About Laxminews 24x7

Check Also

ಮೆಟ್ರೋ ದರ ನಿಗದಿ ಸಮಿತಿ ಸಲ್ಲಿಸಿದ ವರದಿ ಬಹಿರಂಗಪಡಿಸಲು ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

Spread the loveಬೆಂಗಳೂರು: ಬೆಂಗಳೂರು ಮೆಟ್ರೋ ರೈಲಿನ ಟಿಕೆಟ್ ದರ ಹೆಚ್ಚಳ ಸಂಬಂಧ ನಿವೃತ್ತ ನ್ಯಾಯಮೂರ್ತಿ ತರಿಣಿ ನೇತೃತ್ವದ ದರ ನಿಗದಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ