ಬೆಂಗಳೂರು,ಏ.23- ಕೋವಿಡ್ ನಿಯಂತ್ರಣಕ್ಕಾಗಿ ದೇಶಾದ್ಯಂತ್ ಲಾಕ್‍ಡೌನ್ ಜಾರಿಗೊಳಿಸುವ ಯಾವುದೇ ಯೋಜನೆ ಸದ್ಯಕ್ಕೆ ಸರ್ಕಾರದ ಮುಂದೆ ಇಲ್ಲದೇ ಇರುವುದರಿಂದ ಕಾರ್ಮಿಕರು ವದಂತಿಗಳಿಗೆ ಕಿವಿಗೊಡಬಾರದು ಎಂದು ಕಾರ್ಮಿಕ ಇಲಾಖೆ ಮನವಿ ಮಾಡಿದೆ. ಒಂದೆಡೆ ಪೊಲೀಸರು ಎಲ್ಲಾ ರೀತಿಯ ವ್ಯಾಪಾರ ವಹಿವಾಟು ಅಂಗಡಿಗಳನ್ನು ಮುಚ್ಚಿಸಿಕೊಂಡು ಬರುತ್ತಿದ್ದಾರೆ. ಮಾಲೀಕರು ವ್ಯವಹಾರ ನಡೆಸದೇ ಇರುವುದರಿಂದ ಕಾರ್ಮಿಕರಿಗೆ ವೇತನ, ಕಟ್ಟಡದ ಬಾಡಿಗೆ, ವಿದ್ಯುತ್ ಹಾಗೂ ನೀರಿನ ಬಿಲ್ ಸೇರಿದಂತೆ ಇತರ ವೆಚ್ಚಗಳನ್ನು ಭರಿಸಲು ಪರದಾಡುವ ಸ್ಥಿತಿಯಲ್ಲಿದೆ.
ವಾಸ್ತವತೆ ಕಣ್ಣೆದುರಿಗೇ ಇದ್ದರೂ ಕಾರ್ಮಿಕ ಇಲಾಖೆ ವಿಚಿತ್ರ ರೀತಿಯಲ್ಲಿ ಪ್ರಕಟಣೆ ಹೊರಡಿಸಿದ್ದು, ಸರ್ಕಾರ ಮತ್ತು ಕಾರ್ಮಿಕರ ಇಲಾಖೆ ನಿಮ್ಮ ಜತೆಯಲ್ಲಿದೆ ಆತಂಕ ಪಡಬೇಡಿ ಎಂದು ಧೈರ್ಯ ಹೇಳುವ ಪ್ರಯತ್ನ ಮಾಡಿದೆ. ರಾಜ್ಯದಲ್ಲಿ ಲಾಕ್‍ಡೌನ್ ಇಲ್ಲ ಎಂದು ಮುಖ್ಯಮಂತ್ರಿ ಕೂಡ ಸ್ಪಷ್ಟಪಡಿಸಿ ದ್ದಾರೆ.ವಾಸ್ತವತೆ ಕಣ್ಣೆದುರಿಗೇ ಇದ್ದರೂ ಕಾರ್ಮಿಕ ಇಲಾಖೆ ವಿಚಿತ್ರ ರೀತಿಯಲ್ಲಿ ಪ್ರಕಟಣೆ ಹೊರಡಿಸಿದ್ದು, ಸರ್ಕಾರ ಮತ್ತು ಕಾರ್ಮಿಕರ ಇಲಾಖೆ ನಿಮ್ಮ ಜತೆಯಲ್ಲಿದೆ ಆತಂಕ ಪಡಬೇಡಿ ಎಂದು ಧೈರ್ಯ ಹೇಳುವ ಪ್ರಯತ್ನ ಮಾಡಿದೆ. ರಾಜ್ಯದಲ್ಲಿ ಲಾಕ್‍ಡೌನ್ ಇಲ್ಲ ಎಂದು ಮುಖ್ಯಮಂತ್ರಿ ಕೂಡ ಸ್ಪಷ್ಟಪಡಿಸಿ ದ್ದಾರೆ.
Laxmi News 24×7