ಬೆಂಗಳೂರು: ಕೊರೊನಾ ಸೋಂಕು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಮಣ್ಣ (61) ಎಂಬುವರು ಆಸ್ಪತ್ರೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
‘ಅಂಜನಾನಗರದ ರಾಮಣ್ಣ, ವಿಜಯನಗರದ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದರು. ಶುಕ್ರವಾರ ತಡರಾತ್ರಿ ಆಸ್ಪತ್ರೆಯ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಪಾಟೀಲ ತಿಳಿಸಿದರು.
‘ಘಟನೆ ಸಂಬಂಧ ಮಗನಿಂದ ದೂರು ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದೂ ಹೇಳಿದರು.
Laxmi News 24×7