ಬೆಳಗಾವಿ: ಜಿಲ್ಲೆಯಲ್ಲಿ 7 ಜನರಿಗೆ ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ಒಟ್ಟು 18 ಜನರ ಗಂಟಲು ದ್ರವ ಸಂಗ್ರಹಿಸಿ ಸೋಮವಾರ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಕೊರೊನಾ ಮೊದಲು ಮೂರು ಬಳಿಕ ನಾಲ್ಕು ಒಟ್ಟು ಏಳು ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ. ಇದರಿಂದ ಸೋಂಕಿತರ ಸಂಪರ್ಕಕ್ಕೆ ಬಂದಿರುವ ಜನರನ್ನು ಗುರುತಿಸಿ ಗಂಟಲು ದ್ರವ ಸಂಗ್ರಹಿಸಲಾಗಿದೆ. ಜತೆಗೆ ಇಂದು ಸಹ ಕೆಲವರ ಗಂಟಲು ದ್ರವ ಸಂಗ್ರಹ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
79 ಕೊರೊನಾ ಶಂಕಿತರ ಗಂಟಲು ದ್ರವ ಸಂಗ್ರಹಿಸಲಾಗಿತ್ತು. 69 ಜನ ವರದಿ ನೆಗೆಟಿವ್ ಬಂದಿದೆ. 7 ಜನ ವರದಿ ಪಾಸಿಟೀವ್ ಬಂದಿದೆ. ಇನ್ನೂ 3 ವರದಿಗಳು ಬರಬೇಕಿದೆ. ಜಿಲ್ಲೆಯಲ್ಲಿ ಒಟ್ಟು 850 ಜನರ ಮೇಲೆ ಆರೋಗ್ಯ ಇಲಾಖೆ ನಿಗಾ ಇಡಲಾಗಿದೆ.
Laxmi News 24×7