Breaking News

ಲಾಕ್ ಡೌನ್ ಅವಧಿಯನ್ನು ಮತ್ತೆ ಒಂದು ವಾರಗಳ ಕಾಲ ವಿಸ್ತರಣೆ

Spread the love

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಈಗಾಗಲೇ ಜಾರಿಯಲ್ಲಿರುವ ಲಾಕ್ ಡೌನ್ ಅವಧಿಯನ್ನು ಮತ್ತೆ ಒಂದು ವಾರಗಳ ಕಾಲ ವಿಸ್ತರಣೆ ಮಾಡಿ ಸಿಎಂ ಅರವಿಂದ್ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಕೇಜ್ರಿವಾಲ್, ದೆಹಲಿಯಲ್ಲಿ ಸೋಂಕಿತರ ಸಂಖ್ಯೆ ಜೊತೆಗೆ ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಸೋಂಕು ನಿಯಂತ್ರಣಕ್ಕೆ ಈಗಾಗಲೇ 6 ದಿನಗಳ ಕಾಲ ಲಾಕ್ ಡೌನ್ ಜಾರಿಯಲ್ಲಿದ್ದು ನಾಳೆ ಬೆಳಿಗ್ಗೆ 6 ಗಂಟೆಗೆ ಈ ಲಾಕ್ ಡೌನ್ ಅವಧಿ ಮುಗಿಯಲಿದೆ. ಆದರೆ ಈ ನಡುವೆ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ನ್ನು ಮತ್ತೆ 1 ವಾರ ಕಾಲ ವಿಸ್ತರಿಸಲಾಗಿದೆ ಎಂದರು.

ದೆಹಲಿಯಲ್ಲಿ ನಿನ್ನೆ ದಿನ 24,000 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆಯಾಗಿತ್ತು. ಅಲ್ಲದೇ ಒಂದೇ ದಿನದಲ್ಲಿ 357 ಜನ ಸೋಂಕಿಗೆ ಬಲಿಯಾಗಿದ್ದರು. ಈ ನಡುವೆ ದೆಹಲಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಆರಂಭವಾಗಿದ್ದು, ರೋಗಿಗಳ ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಲಾಕ್ ಡೌನ್ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಹೋರಿ ತಿವಿದು ವೃದ್ಧ ಸಾವು, ಇಬ್ಬರು ಗಂಭೀರ

Spread the loveಹಾವೇರಿ: ಕೊಬ್ಬರಿ ಹೋರಿ ತಿವಿದು ಓರ್ವ ವಯೋವೃದ್ಧ ವ್ಯಕ್ತಿ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ಇಂದು ನಡೆಯಿತು. ಮೃತರನ್ನು 70 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ