ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯಲಿರುವ ಎಲ್ಲ ಚುನಾವಣೆಗಳನ್ನೂ ಮುಂದೂಡುವಂತೆ ಚುನಾವಣೆ ಆಯೋಗಕ್ಕೆ ರಾಜ್ಯ ಸರಕಾರ ಶಿಫಾರಸ್ಸು ಮಾಡಲಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ವಿಷಯ ತಿಳಿಸಿದ್ದಾರೆ. ಮುಂದಿನ 14 ದಿನ ಜನತಾ ಕರ್ಫ್ಯೂ ಜಾರಿಯಾಗಲಿದ್ದು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲವನ್ನೂ ಬಂದ್ ಮಾಡಲಾಗುವುದು. ಪರಿಸ್ಥಿತಿ ಸುಧಾರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.
ತಾಲೂಕು, ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಸೇರಿದಂತೆ ಎಲ್ಲ ಚುನಾವಣೆಗಳನ್ನೂ ಪರಿಸ್ಥಿತಿ ಸುಧಾರಿಸುವವರೆಗೂ ಮುಂದೂಡುವಂತೆ ರಾಜ್ಯ ಸರಕಾರ ಶಿಫಾರಸ್ಸು ಮಾಡಲು ನಿರ್ಧರಿಸಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಈಚೆಗೆ ನಡೆದ ಉಪ ಚುನಾವಣೆಗಳಿಂದಾಗಿಯೇ ಕೊರೋನಾ ಶರವೇಗದಲ್ಲಿ ಹರಡಿದೆ ಎನ್ನುವ ಆರೋಪ ಕೇಳಿ ಬಂದಿತ್ತು.
Laxmi News 24×7