Breaking News

14 ದಿನಗಳ ಕಾಲ ಏನಿರುತ್ತೆ ಏನಿರಲ್ಲ ಇಲ್ಲಿದೆ ಮಾಹಿತಿ:

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ನಿಯಮ ಜಾರಿ ಮಾಡಿದ್ದು, ನಾಳೆಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ಮಾದರಿ ಬಂದ್ ಜಾರಿ ಮಾಡಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಕೊರೊನಾ ಸೋಂಕು ನಿಯಂತ್ರಣಕ್ಕೆರಾಜ್ಯದಲ್ಲಿ ಮುಂದಿನ 2 ವಾರ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಏನಿರುತ್ತೆ ಏನಿರಲ್ಲ ಇಲ್ಲಿದೆ ಮಾಹಿತಿ:

* ನಾಳೆಯಿಂದ 14 ದಿನಗಳ ಕಾಲ ಬೆಳಿಗ್ಗೆ 6ರಿಂದ 10ಗಂಟೆವರೆಗೆ ಅಗತ್ಯ ವಸುಗಳ ಖರೀದಿಗೆ ಮಾತ್ರ ಅವಕಾಶ
* ಕೆ ಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಸೇರಿದಂತೆ ಸಾರಿಗೆ ಸಂಚಾರ ಸಂಪೂರ್ಣ ಬಂದ್
* ಖಾಸಗಿ ವಾಹನ ಸಂಚಾರಕ್ಕೆ ನಿಷೇಧ
* ಗೂಡ್ಸ್ ಸರಕು ಸಾಗಾಟಕ್ಕೆ ಮಾತ್ರ ಅವಕಾಶ
* ಹೋಟೆಲ್ ನಲ್ಲಿ ಪಾರ್ಸೆಲ್ ಗೆ ಅವಕಾಶ
* ಮದ್ಯಗಂಡಿಗಳು ಓಪನ್, ಆದರೆ ಪಾರ್ಸೆಲ್ ಗೆ ಅವಕಾಶ
* ಮೆಟ್ರೋ ಸೇವೆ ಸ್ಥಗಿತ
* ಬ್ಯಾಂಕಿಂಗ್ ಕ್ಷೇತ್ರಕ್ಕೆ ಅವಕಾಶ
* ಕೃಷಿ ಚಟುವಟಿಕೆ, ಕಟ್ಟಡ ನಿರ್ಮಾಣಕ್ಕೆ ಅವಕಾಶ
* 18-45 ವರ್ಷಗಳವರೆಗಿನವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ
* ಚುನಾವಣೆಗಳನ್ನು ಮುಂದೂಡಲು ಶಿಫಾರಸು


Spread the love

About Laxminews 24x7

Check Also

ಅಂತರರಾಜ್ಯ ಕಳ್ಳರನ್ನು ಬಂಧಿಸಿ 6.11 ಲಕ್ಷ ರೂ. ಮೌಲ್ಯದ ವಸ್ತುಗಳ ಜಪ್ತಿ

Spread the loveಬೆಳಗಾವಿ: ಹಾರೂಗೇರಿ ಠಾಣೆ ವ್ಯಾಪ್ತಿಯಲ್ಲಿ ಈಚೆಗೆ ನಡೆದಿದ್ದ ಕಳ್ಳತನ ಪ್ರಕರಣದ ತನಿಖೆಯಲ್ಲಿ ಮಹಾರಾಷ್ಟ್ರ ಮೂಲಕ 7 ಅಂತರರಾಜ್ಯ ಕಳ್ಳರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ