ಬೆಂಗಳೂರು : ರಾಜ್ಯಾಧ್ಯಂತ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವ ತುರ್ತು ಸಂದರ್ಭ ಒದಗಿ ಬಂದಿದೆ. ಇಂತಹ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸಲಹೆ ಮಾಡಲಾಗಿದೆ. ಸಭೆಯ ಬಳಿಕ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಪ್ರಕಟಿಸಲಿದ್ದಾರೆ ಎಂದು ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.
ಸಂಪುಟ ಸಭೆಯ ಬಳಿಕ ಮಾತನಾಡಿದಂತ ಸಚಿವ ಎಂ.ಟಿ.ಬಿ ನಾಗರಾಜ್ ಅವರು, ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇದನ್ನು ನಿಯಂತ್ರಿಸಬೇಕಿದೆ. ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಕೂಡ ಕಡಿಮೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕೈಗೊಳ್ಳಬಹುದಾದಂತ ಕ್ರಮಗಳ ಕುರಿತಂತೆ ಸಲಹೆ ಮಾಡಲಾಗಿದೆ. ಆ ನಿಟ್ಟಿನಲ್ಲಿ ಕೊರೋನಾ ನಿಯಂತ್ರಣ ಕುರಿತಂತೆ ಸಿಎಂ ಯಡಿಯೂರಪ್ಪ ಕಟ್ಟು ನಿಟ್ಟಿನ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎಂಬುದಾಗಿ ತಿಳಿಸಿದರು.
Laxmi News 24×7