Breaking News

ಸಾರ್ವಜನಿಕರ ಬೇಡಿಕೆಗಳಿಗೆ ಅನುಗುಣವಾಗಿ12 ಸಾವಿರಕ್ಕೂ ಹೆಚ್ಚು ಬಸ್ಸುಗಳನ್ನು ವ್ಯವಸ್ಥೆ

Spread the love

ಬೆಂಗಳೂರು: ನಾಳೆಯಿಂದ ಕರ್ಫ್ಯೂ ಮತ್ತು ಲಾಕ್ಡೌನ್ ಬಿಗಿಗೊಳಿಸಿರುವುದರಿಂದ ಗಮನಾರ್ಹ ಸಂಖ್ಯೆಯ ಸಾರ್ವಜನಿಕರು ತಮ್ಮತಮ್ಮ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ನಮ್ಮ 3 ಸಾರಿಗೆ ನಿಗಮಗಳಿಂದ ಸಾರ್ವಜನಿಕರ ಬೇಡಿಕೆಗಳಿಗೆ ಅನುಗುಣವಾಗಿ12 ಸಾವಿರಕ್ಕೂ ಹೆಚ್ಚು ಬಸ್ಸುಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಈ ಬಸ್ಸುಗಳು ಬೆಂಗಳೂರಿನಿಂದ ಹೊರಗಡೆ ಮತ್ತು ಬೇರೆ ಬೇರೆ ಪ್ರದೇಶಗಳಿಂದ ಬೆಂಗಳೂರಿಗೆ ಮತ್ತು ಇತರ ಪ್ರದೇಶಗಳಿಗೆ ಸಂಚರಿಸಲಿವೆ. ನಾಳೆ ರಾತ್ರಿಯ ನಿಗದಿತ ಕರ್ಫ್ಯೂ ಸಮಯದ ಒಳಗೆ ಸಂಚರಿಸಲಿರುವ ಬಸ್ಸುಗಳ ಈ ವಿಶೇಷ ವ್ಯವಸ್ಥೆಯನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆoದು ತಿಳಿಸಿದ್ದಾರೆ.

ನಾಳೆ ರಾತ್ರಿಯ ಒಳಗೆ ತಮ್ಮ ಸ್ಥಳಕ್ಕೆ ತಲುಪಬೇಕಾದ ಪ್ರಯಾಣಿಕರು ಯಾವುದೇ ಆತಂಕವಿಲ್ಲದೆ, ನಿಗದಿತ ಕೋವಿಡ್ ಮಾರ್ಗಸೂಚಿ ಅನ್ವಯ ಮುಂಜಾಗ್ರತೆ ವಹಿಸಿ ಈ ಸಾರಿಗೆ ವ್ಯವಸ್ಥೆಯನ್ನು ಸೂಕ್ತವಾಗಿ ಬಳಸಿಕೊಳ್ಳಬಹುದಾಗಿದೆ ಎಂದು ವಿವರಿಸಿದ್ದಾರೆ.


Spread the love

About Laxminews 24x7

Check Also

ಗೋಕಾಕ ನಗರದ ಶೆಪರ್ಡ್ ಮಿಷನ್ ಆಂಗ್ಲ ಮಾದ್ಯಮ ಶಾಲೆಯ 16 ನೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ

Spread the loveಗೋಕಾಕ ನಗರದ ಶೆಪರ್ಡ್ ಮಿಷನ್ ಆಂಗ್ಲ ಮಾದ್ಯಮ ಶಾಲೆಯ 16 ನೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ