Breaking News

ಆಸ್ಪತ್ರೆಗೆ ದಾಖಲಾದ 2-3 ದಿನಕ್ಕೆ ಜನ ಸಾಯುತ್ತಿದ್ದಾರೆ,ನಟ ಜಗ್ಗೇಶ್ ಮುಖ್ಯ ಮಂತ್ರಿ ಯಡಿಯೂರಪ್ಪ ಅವರಿಗೆ ಟ್ವೀಟ್ ಮೂಲಕ ಪ್ರಶ್ನೆ

Spread the love

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಂದ ದಿನಕ್ಕೆ ನೂರಾರು ಜನ ಸಾಯುತ್ತಿದ್ದಾರೆ. ಇದೇ ಹಿನ್ನೆಲೆಯಲ್ಲಿ ಹಿರಿಯ ನಟ ಜಗ್ಗೇಶ್ ಮುಖ್ಯ ಮಂತ್ರಿ ಯಡಿಯೂರಪ್ಪ ಅವರಿಗೆ ಟ್ವೀಟ್ ಮೂಲಕ ಪ್ರಶ್ನೆ ಮಾಡಿ, ಆಸ್ಪತ್ರೆಗಳಲ್ಲಿ ಪಾರದರ್ಶಕತೆ ಇರಲಿ ಎಂದು ಹೇಳಿದ್ದಾರೆ.

ಆಸ್ಪತ್ರೆಗೆ ದಾಖಲಾದ ಸೋಂಕಿತರು 2 ರಿಂದ 3 ದಿನಕ್ಕೆ ಸಾಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಏನಾಗುತ್ತಿದೆ ಎಂಬುದು ಸತ್ತವರ ಕುಟುಂಬದವರಿಗೆ ತಿಳಿಯುತ್ತಿಲ್ಲ ಎಂದು ಆಸ್ಪತ್ರೆಗಳ ಬಗ್ಗೆ ಅಸಮಧಾನ ಹೊರ ಹಾಕಿದ್ದಾರೆ.

ಈ ಬಗ್ಗೆ ಟ್ವೀಟ್ ನಲ್ಲಿ ಬರೆದುಕೊಂಡಿರುವ ನವರಸ ನಾಯಕ ಜಗ್ಗೇಶ್, ಮಾನ್ಯ ಮುಖ್ಯ ಮಂತ್ರಿಗಳ ಗಮನಕ್ಕೆ, ಸಾರ್ ಯಾವು ಕೊರೋನ ರೋಗಿ ಅಡ್ಮಿಟ್ ಆದ 2 ರಿಂದ 3 ದಿನಕ್ಕೆ ಸಾವು ಸಂಭವಿಸುತ್ತಿದೆ (ಸ್ವಂತ ಅನುಭವ). ಯಾವ ಚಿಕಿತ್ಸೆ ನೀಡುತ್ತಾರೆ ಎಂಬುದು ಬಂಧುಗಳಿಗೆ ತಿಳಿಯದು. ಸಾವಾಗಿದೆ ಎಂದು ತಿಳಿಸುತ್ತಾರೆ. ಆದ್ರೆ ಸತ್ತವರ ಮುಖಸಹಿತ ನೋಡಲಾಗದು. ಬೆರಳೆಣಿಕೆಯಷ್ಟು ಕೆಲ ಸಿಬ್ಬಂದಿ ಹೊರತುಪಡಿಸಿ ತಜ್ನರು ರೋಗಿಯ ಬಗ್ಗೆ ಮಾಹಿತಿ ಪಡೆಯಲು ಸಿಗುವುದಿಲ್ಲ . ಪ್ರತಿ ರೋಗಿಯ ಮನೆಯವರಿಗೆ ದೂರದಿಂದ ನೋಡಲು ಅವಕಾಶ ಮಾಡಕೊಡಬೇಕು. ಇಲ್ಲದಿದ್ದರೆ ಒಳಗೆ ನಡೆಯುವ ವಿಷಯ ಹೊರಗೆ ಅರಿವಾಗುವುದಿಲ್ಲ.

ಸೋಂಕಿತರನ್ನು ದಾಖಲು ಮಾಡಿಕೊಂಡ ನಂತರ ಯಾವ ವಿಷಯ ಹೊರಗೆ ತಿಳಿಸದೆ ರೋಗಿಯ ಸಾವಿನ ಜೊತೆ ಮನೆಯವರು ಸಾಯುವಂತೆ ಭಯ ನೀಡುತ್ತಾರೆ. ಈ ಬಗ್ಗೆ ಅರಿವಿರದವರು ಸರ್ಕಾರದ ಕಾರ್ಯ ಶ್ರಮವನ್ನು ದೂಷಣೆ ಮಾಡಿ ಸತ್ಯ ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ದಯಮಾಡಿ ಆಸ್ಪತ್ರೆಗಳಲ್ಲಿ ಪಾರದರ್ಶಕ ವ್ಯವಸ್ಥೆ ಆಗಲಿ ಎಂದು ಯಡಿಯೂರಪ್ಪ ಅವರಿಗೆ ಟ್ವೀಟ್ ಮಾಡಿದ್ದಾರೆ.


Spread the love

About Laxminews 24x7

Check Also

ವಾರದಲ್ಲಿ 6 ದಿನ ಮೌನ ವ್ರತ: ಭಕ್ತರ ಅಚ್ಚರಿಗೆ ಕಾರಣವಾಯ್ತು ಗವಿಸಿದ್ದೇಶ್ವರ ಸ್ವಾಮೀಜಿ ನಡೆ

Spread the loveಕೊಪ್ಪಳ, ಅಕ್ಟೋಬರ್​ 14: ಗವಿಮಠದ ಪೀಠಾಧಿಪತಿ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು (Abhinava Gavisiddeshwara Swamiji) ನಡೆದಾಡುವ ದೇವರು ಎಂದೇ ಪ್ರಸಿದ್ದ. ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ