Breaking News

ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಗರ್ಭಿಣಿ ಬಲಿ

Spread the love

ಚಿಕ್ಕಬಳ್ಳಾಪುರ: ಮೂರು ತಿಂಗಳ ಗರ್ಭಿಣಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಕಾಶಾಪುರ ಗ್ರಾಮದಲ್ಲಿ ನಡೆದಿದೆ.

ಪವಿತ್ರ (22) ಮೃತ ಮಹಿಳೆ. ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ದುಗ್ಗಿನಾಯ್ಕನಪಲ್ಲಿ ನಿವಾಸಿ ಪವಿತ್ರಾಳನ್ನ ಇದೇ ಬಾಗೇಪಲ್ಲಿ ತಾಲೂಕಿನ ಕಾಶಪುರ ಗ್ರಾಮದ ಮಧು ಕಳೆದ 5 ತಿಂಗಳ ಹಿಂದೆ ಮದುವೆ ಮಾಡಿಕೊಂಡಿದ್ದ.

ಮದುವೆಯಾದ ನಂತರ ಪವಿತ್ರಳ ಗಂಡ ಮಧು ಹಾಗೂ ಆಕೆಯ ಅತ್ತೆ ವರದಕ್ಷಿಣೆಗಾಗಿ ಪ್ರತಿದಿನ ಒಂದಿಲ್ಲೊಂದು ರೀತಿಯಲ್ಲಿ ಹಿಯಾಳಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದರಂತೆ. ನಿನ್ನೆ ಇದೆ ವಿಚಾರಕ್ಕೆ ಅತ್ತೆ ಸೊಸೆಗೆ ಜಗಳವಾಗಿದೆ. ಆಗ ಮಧು ಹಾಗೂ ಆತನ ತಾಯಿ ಇಬ್ಬರು ಸೇರಿಕೊಂಡು ಪವಿತ್ರಳ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಅಂತ ಮೃತಳ ಸಂಬಂಧಿಗಳು ಬಾಗೇಪಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ವರದಕ್ಷಿಣಿ ಕಿರುಕುಳ ಹಾಗೂ ಕೊಲೆ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಮೃತ ಪವಿತ್ರ ಗಂಡ ಹಾಗೂ ಅತ್ತೆಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ