Breaking News

ಜನರ ಸಾವು, ನೋವು, ಸಂಕಟ, ಕಣ್ಣೀರಿಗೆ ರಾಜ್ಯ ಸರ್ಕಾರ ಕಾರಣ’

Spread the love

ಬೆಂಗಳೂರು: ‘ಕೋವಿಡ್‌ ತಾಂತ್ರಿಕ ಸಲಹಾ ಸಮಿತಿಯ ವರದಿಯನ್ನು ರಾಜ್ಯ ಸರ್ಕಾರ ಸಂಪೂರ್ಣ ನಿರ್ಲಕ್ಷಿಸಿದ್ದು ಜನರ ಸಾವು, ನೋವು, ಸಂಕಟ, ಕಣ್ಣೀರಿಗೆ ಕಾರಣ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.

ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಕೇಂದ್ರ ಮತ್ತು ರಾಜ್ಯ ಸರ್ಕಾರ ತಮ್ಮ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯತನದ ಬದಲಿಗೆ ಲಾಕ್‌ಡೌನ್ ಘೋಷಿಸಿ ದುಡಿಯುವ ವರ್ಗ ಮತ್ತು ಸಮುದಾಯಗಳನ್ನು ಹಸಿವಿಗೆ ದೂಡಿವೆ’ ಎಂದರು.

‘ಲಕ್ಷಾಂತರ ಮಂದಿ ಆರೋಗ್ಯ ಸವಲತ್ತು ಸಿಗದೆ ಸಾವು ಬದುಕಿನ ನಡುವೆ ಸೆಣಸುತ್ತಿದ್ದಾರೆ. ಇದರ ಸಂಪೂರ್ಣ ಹೊಣೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಹೊತ್ತುಕೊಳ್ಳಬೇಕು’ ಎಂದರು.

‘ರಾಜ್ಯ ಸರ್ಕಾರ ಎಲ್ಲದರಲ್ಲೂ ಸುಳ್ಳು ಹೇಳುತ್ತಿದೆ. ಸಾವಿನ ಸಂಖ್ಯೆಯನ್ನೂ ಮುಚ್ಚಿಡುತ್ತಿದೆ. ಸರ್ಕಾರದ ಲೆಕ್ಕಕ್ಕೂ, ಬಿಬಿಎಂಪಿ ನೀಡುವ ಲೆಕ್ಕಕ್ಕೂ, ಅಂಕಿ-ಸಂಖ್ಯೆ ಇಲಾಖೆಯ ಲೆಕ್ಕಕ್ಕೂ ಭಾರೀ ವ್ಯತ್ಯಾಸವಿದೆ. ಆ ಮೂಲಕ, ತನ್ನ ಲೋಪಗಳಿಗೆ ತೇಪೆ ಹಾಕಿಕೊಳ್ಳಲು ಸರ್ಕಾರ ಯತ್ನಿಸುತ್ತಿದೆ” ಎಂದು ದೂರಿದರು.

‘ತಜ್ಞ ವೈದ್ಯ ದೇವಿಪ್ರಸಾದ್ ಶೆಟ್ಟಿ ಅವರ ಪ್ರಕಾರ ಸೋಂಕಿತರ ಪ್ರಮಾಣ ಇನ್ನೂ ಐದು ಪಟ್ಟು ಹೆಚ್ಚಿದೆ. ಕೋವಿಡ್ ಪರೀಕ್ಷೆಗಳು ಕಡಿಮೆ ನಡೆಯುತ್ತಿರುವುದರಿಂದ ಪಾಸಿಟಿವ್ ಪ್ರಕರಣಗಳ ಪ್ರಮಾಣ ಕೂಡ ಕಡಿಮೆ ಇದೆ. ಹೀಗಾಗಿ, ಈಗಿರುವುದಕ್ಕಿಂತ ಐದು ಪಟ್ಟು ಹೆಚ್ಚು ಸೋಂಕಿತರು ಇರುವ ಸಾಧ್ಯತೆ ಇದೆ’ ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು.

‘ಆಕ್ಸಿಜನ್, ವೆಂಟಿಲೇಟರ್, ಬೆಡ್‌ಗಳು, ಆಸ್ಪತ್ರೆಗಳು, ಔಷಧಗಳು, ಲಸಿಕೆ, ರೆಮ್‌ಡಿಸಿವಿರ್‌ ಚುಚ್ಚುಮದ್ದು ಇಲ್ಲದೆ ಜನ ಸಾಯುವ ಸಮಯದಲ್ಲಿಯೂ ಅನಾಗರಿಕ, ಅಮಾನವೀಯ ಹೇಳಿಕೆಗಳನ್ನು ನೀಡುತ್ತಿರುವ ಬಿಜೆಪಿ ಮುಖ್ಯಮಂತ್ರಿಗಳು, ಪ್ರಧಾನಿ, ಕೇಂದ್ರ ಸಚಿವರನ್ನು ಜನರು ಕ್ಷಮಿಸುವುದಿಲ್ಲ’ ಎಂದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ