Breaking News

ಇಡೀ ದಿನ ಬಾರ್ ಓಪನ್ ಇರ್ತಾವೆ ಎಂದೇ ಹೇಳಲಾಗಿತ್ತು. ಆದ್ರೇ.. ಇಡೀ ದಿನ ಓಪನ್ ಇರೋದಿಲ್ಲ

Spread the love

ಬೆಂಗಳೂರು : ರಾಜ್ಯದಲ್ಲಿ ಇಂದು ರಾತ್ರಿ 9 ಗಂಟೆಯಿಂದ ಮೇ.12ರವರೆಗೆ ಕೊರೋನಾ ಕರ್ಪ್ಯೂ ಜಾರಿಗೊಳಿಸಿದೆ. ಕೊರೋನಾ ನಿಯಂತ್ರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ. ಇದರ ಮಧ್ಯೆಯೂ ಮದ್ಯ ಸರಬರಾಜಿಗೆ ಸರ್ಕಾರ ಅವಕಾಶ ನೀಡಿತ್ತು. ಇಡೀ ದಿನ ಬಾರ್ ಓಪನ್ ಇರ್ತಾವೆ ಎಂದೇ ಹೇಳಲಾಗಿತ್ತು. ಆದ್ರೇ.. ಇಡೀ ದಿನ ಓಪನ್ ಇರೋದಿಲ್ಲ. ಅಗತ್ಯ ವಸ್ತು ಖರೀದಿಸೋದಕ್ಕೆ ನಿಗದಿಪಡಿಸಿರುವಂತೆ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರವೇ ಅವಕಾಶವನ್ನು ನೀಡಲಾಗಿದೆ. ಈ ಮೂಲಕ ಮದ್ಯಪ್ರಿಯರಿಗೆ ಬಿಗ್ ಶಾಕ್ ನೀಡಿದೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾಹಿತಿ ನೀಡಿರುವಂತ ಅಬಕಾರಿ ಸಚಿವ ಗೋಪಾಲಯ್ಯ ಅವರು, ಕೊರೋನಾ ಕರ್ಪ್ಯೂವನ್ನು ಇಂದು ರಾತ್ರಿ 9 ಗಂಟೆಯಿಂದ ಮೇ.12ರವರೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಜನರು ಕೂಡ ಕೊರೋನಾ ನಿಯಂತ್ರಣಕ್ಕಾಗಿ ಕರ್ಪ್ಯೂ ನಿಯಮವನ್ನು ಉಲ್ಲಂಘಿಸದೇ ಪಾಲಿಸುವಂತೆ ಮನವಿ ಮಾಡಿದರು.

ಇನ್ನೂ ಮುಂದುವರೆದು, ಕೊರೋನಾ ಕರ್ಪ್ಯೂ ನಡುವೆಯೂ ರಾಜ್ಯ ಸರ್ಕಾರದಿಂದ ಬಾರ್ ಓಪನ್ ಮಾಡೋದಕ್ಕೆ ಅವಕಾಶ ನೀಡಲಾಗಿದೆ. ಅಗತ್ಯ ವಸ್ತುಗಳನ್ನು ಖರೀದಿಸಲು ಸಮಯ ನಿಗದಿಪಡಿಸಿರುವಂತೆ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರವೇ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಅದರಲ್ಲೂ ಪಾರ್ಸಲ್ ತೆಗೆದುಕೊಂಡು ಹೋಗೋದಕ್ಕೆ ಮಾತ್ರವೇ ಅನುಮತಿ ನೀಡಲಾಗಿದೆ. ಈ ಸಮಯದಲ್ಲಿ ಮಾತ್ರವೇ ಮದ್ಯ ಮಾರಾಟಕ್ಕೆ ಅವಕಾಶ. ಇದನ್ನು ಹೊರತುಪಡಿಸಿ, ಬೇರೆ ಸಮಯದಲ್ಲಿ ಮಾರಾಟ ಮಾಡುವಂತಿಲ್ಲ ಎಂಬುದಾಗಿ ತಿಳಿಸಿದರು.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ