Breaking News

ಕರ್ನಾಟಕ ಲಾಕ್‌ಡೌನ್; ಜನರಿಗೆ ಮತ್ತೊಮ್ಮೆ ಮನವಿ ಮಾಡಿದ ಸಿಎಂ

Spread the love

ಬೆಂಗಳೂರು, ಏಪ್ರಿಲ್ 28: ಮಂಗಳವಾರ ರಾತ್ರಿಯಿಂದ ರಾಜ್ಯದಲ್ಲಿ ಹದಿನಾಲ್ಕು ದಿನಗಳ ಅವಧಿಯ ಲಾಕ್‌ಡೌನ್ ಆರಂಭವಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜನರಿಗೆ ಮತ್ತೊಮ್ಮೆ ಮನವಿ ಮಾಡಿದ್ದಾರೆ.

ಕೊರೊನಾ ಸರಪಳಿಯನ್ನು ಮುರಿಯಲು ಎರಡು ವಾರಗಳ ಕಠಿಣ ಲಾಕ್‌ಡೌನ್ ಹೇರಲಾಗಿದೆ. ರಾಜ್ಯದ ಪ್ರತಿಯೊಬ್ಬರಿಗೂ ನಾನು ಕೇಳಿಕೊಳ್ಳುತ್ತೇನೆ. ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ. ಸರ್ಕಾರಕ್ಕೆ ಬೆಂಬಲ ನೀಡಿ. ಮನೆಯೊಳಗೇ ಇರಿ. ನಾವೆಲ್ಲರೂ ಒಟ್ಟಾದರೆ ಕೊರೊನಾವನ್ನು ಸೋಲಿಸುವುದು ಸುಲಭವಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮಿತಿ ಮೀರಿದ್ದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಏಪ್ರಿಲ್ 27ರ ರಾತ್ರಿಯಿಂದ 14 ದಿನಗಳ ಕಾಲ ಲಾಕ್‌ಡೌನ್ ಅನ್ನು ಯಡಿಯೂರಪ್ಪ ಸೋಮವಾರ ಘೋಷಿಸಿದ್ದರು.

ಲಾಕ್‌ಡೌನ್ ಅವಧಿಯಲ್ಲಿ ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅವಕಾಶವಿರುವುದಾಗಿ ತಿಳಿಸಿದ್ದರು. ಕಟ್ಟಡ ನಿರ್ಮಾಣ, ಉತ್ಪಾದನಾ ಕ್ಷೇತ್ರ, ಕೃಷಿ ಕ್ಷೇತ್ರಗಳಿಗೆ ಲಾಕ್‌ಡೌನ್‌ನಿಂದ ವಿನಾಯಿತಿ ನೀಡಲಾಗಿತ್ತು.

ಕರ್ನಾಟಕದಲ್ಲಿ ಮಂಗಳವಾರ 31830 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದವು. 10,793 ಮಂದಿ ಗುಣಮುಖರಾಗಿದ್ದು, 180 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದರು.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ