Breaking News

ಇಂದು ಮದುವೆಯಾಗಬೇಕಿದ್ದ ಮದುಮಗ ಕೊರೊನಾಗೆ ಬಲಿ!

Spread the love

ಚಿಕ್ಕಮಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ಇಂದು ಹಸೆಮಣೆ ಏರಬೇಕಾಗಿದ್ದ ಯುವಕನೋರ್ವ ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ದೇವರಕೊಡಿಗೆಯಲ್ಲಿ ಇಂದು ಮದುವೆಯಾಗಬೇಕಿದ್ದ 32 ವರ್ಷದ ಪೃಥ್ವಿರಾಜ್ ಎಂಬ ಯುವಕ ಶಿವಮೊಗ್ಗ ಮೆಗ್ಗಾನ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ.

10 ದಿನಗಳ ಹಿಂದೆ ಬೆಂಗಳೂರಿನಿಂದ ಮನೆಗೆ ಬಂದಿದ್ದ ಪೃಥ್ವಿರಾಜ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿತ್ತು. ಕೂಡಲೇ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮದುವೆ ಕಾರ್ಯಕ್ರಮದ ನಿಮಿತ್ತ ಸಂಭ್ರಮ ನೆಲಸಬೇಕಿದ್ದ ಮನೆಯಲ್ಲಿ ಸೂತಕ ಆವರಿಸಿದ್ದು, ಯುವಕನ ಸಾವಿಗೆ ಗ್ರಾಮಸ್ಥರು, ಸಂಬಂಧೀಕರು ಕಣ್ಣೀರಿಡುತ್ತಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ