ಹಿರೇಕೆರೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ ಕೋವಿಡ್ ಚಿಕಿತ್ಸೆ ನೀಡುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಹೌದು, ಬಿಪಿಎಲ್ ಕಾರ್ಡ್ ಹೊಂದಿರುವ ತಮ್ಮ ಕ್ಷೇತ್ರದ ಬಡವರು ಕೋವಿಡ್ ಸೋಂಕಿತರಾಗಿ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಮುಂದಾದರೆ ಅಂತವರಿಗೆ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಹೇಳಿದ್ದಾರೆ. ಈ ಮೂಲಕ ತಮ್ಮ ಕ್ಷೇತ್ರದ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸಿಹಿಸುದ್ದಿ ನೀಡಿದ್ದಾರೆ.
ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಚಿವರು, ಹಿರೇಕೆರೂರು ಮತಕ್ಷೇತ್ರ ವ್ಯಾಪ್ತಿಯಲ್ಲಿನ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಸದಸ್ಯರು ಕೋವಿಡ್ ಸೋಂಕಿನ ಹಿನ್ನೆಲೆ ಹಿರೇಕೆರೂರು ಸೇರಿದಂತೆ ಹಾವೇರಿ ಜಿಲ್ಲೆಯ ಯಾವುದೇ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಲ್ಲಿ, ಅಂತವರ ಚಿಕಿತ್ಸಾ ವೆಚ್ಚವನ್ನು ವೈಯಕ್ತಿಕವಾಗಿ ಭರಿಸಲು ತೀರ್ಮಾನಿಸಿದ್ದೇನೆ ಎಂದು ಹೇಳಿದ್ದಾರೆ.
ಹಿರೇಕೆರೂರು ಮತಕ್ಷೇತ್ರ ವ್ಯಾಪ್ತಿಯಲ್ಲಿನ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಸದಸ್ಯರು ಕೋವಿಡ್ ಸೋಂಕಿನ ಹಿನ್ನೆಲೆ ಹಿರೇಕೆರೂರು ಸೇರಿದಂತೆ ಹಾವೇರಿ ಜಿಲ್ಲೆಯ ಯಾವುದೇ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಲ್ಲಿ, ಅಂತವರ ಚಿಕಿತ್ಸಾ ವೆಚ್ಚವನ್ನು ವೈಯಕ್ತಿಕವಾಗಿ ಭರಿಸಲು ತೀರ್ಮಾನಿಸಿದ್ದೇನೆ.#Hirekerur | #Rattihalli pic.twitter.com/ZCpHHDKS93
— B C Patil (@bcpatilkourava) April 28, 2021
Laxmi News 24×7