Breaking News
Home / Uncategorized / ಪಳಗಿದ ರಾಜಕಾರಣಿಗಳಿಗೆ ಮತದಾನದ ದಿನವೇ ಜನರ ನಾಡಿಮಿಡಿತ ಅರ್ಥ ,ಫಲಿತಾಂಶಕ್ಕೂ ಮುನ್ನವೇ ಮಂದಹಾಸ ಬೀರಿದ ಸತೀಶ್ ಜಾರಕಿಹೊಳಿ!

ಪಳಗಿದ ರಾಜಕಾರಣಿಗಳಿಗೆ ಮತದಾನದ ದಿನವೇ ಜನರ ನಾಡಿಮಿಡಿತ ಅರ್ಥ ,ಫಲಿತಾಂಶಕ್ಕೂ ಮುನ್ನವೇ ಮಂದಹಾಸ ಬೀರಿದ ಸತೀಶ್ ಜಾರಕಿಹೊಳಿ!

Spread the love

ಪಳಗಿದ ರಾಜಕಾರಣಿಗಳಿಗೆ ಮತದಾನದ ದಿನವೇ ಜನರ ನಾಡಿಮಿಡಿತ ಅರ್ಥವಾಗುತ್ತದೆ ಎನ್ನುವ ಮಾತಿದೆ. ಒಂದು ಲೋಕಸಭಾ ಮತ್ತು ಎರಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಿನ್ನೆ (ಏ 17) ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಮತದಾನದ ಪ್ರಮಾಣ ಹೆಚ್ಚಾದರೆ ಒಂದು ಪಕ್ಷಕ್ಕೆ ಗೆಲುವು, ಕಮ್ಮಿಯಾದರೆ ಇನ್ನೊಂದು ಪಕ್ಷಕ್ಕೆ ಸೋಲು ಎನ್ನುವ ಲೆಕ್ಕಾಚಾರ ಇತ್ತೀಚಿನ ದಿನಗಳಲ್ಲಿ ಅಷ್ಟಾಗಿ ವರ್ಕೌಟ್ ಆಗುತ್ತಿಲ್ಲ.
ಇದಕ್ಕೆ, ಕೊಡಬಹುದಾದ ಉದಾಹರಣೆ, ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಬೆಂಗಳೂರು ವ್ಯಾಪ್ತಿಯ ನಾಲ್ಕು ಲೋಕಸಭಾ ಕ್ಷೇತ್ರದ ಫಲಿತಾಂಶ. ತೀವ್ರ ಜ್ವರದ ನಡುವೆಯೂ ಮಾತ್ರೆ ಸೇವಿಸಿ ಬಿಎಸ್ವೈ ಪ್ರಚಾರ: ಸೋಲಿನ ಭೀತಿಯೇ? ಖರ್ಚು ಮಾಡಲು ಸರಿಯಾದ ಆರ್ಥಿಕ ವ್ಯವಸ್ಥೆ ಇದ್ದರೆ, ಪ್ರತೀ ಪೋಲಿಂಗ್ ಬೂತ್ ನಲ್ಲೂ ಪಕ್ಷಗಳು ತಮ್ಮ ಏಜೆಂಟ್ ಗಳನ್ನು ನೇಮಿಸಿರುತ್ತವೆ. ಕಾಂಗ್ರೆಸ್ ಮತ್ತು ಬಿಜೆಪಿ ರಾಷ್ಟ್ರೀಯ ಪಕ್ಷಗಳಾಗಿರುವುದರಿಂದ ಈ ಪಕ್ಷದ ಅಭ್ಯರ್ಥಿಗಳಿಗೆ ದುಡ್ಡಿನ ಸಮಸ್ಯೆ ಇದೆ ಎಂದರೆ ಕುಬೇರನೂ ಮೆಚ್ಚಲಾರ.
ಉಪ ಚುನಾವಣೆ: RSS ನೀಡಿದ ಗುಪ್ತ ಮಾಹಿತಿಯಲ್ಲಿ ಬಿಜೆಪಿಗೆ ಶಾಕ್? ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸತೀಶ್ ಜಾರಕಿಹೊಳಿ, ಫಲಿತಾಂಶಕ್ಕು ಮುನ್ನವೇ ಭಾರೀ ವಿಶ್ವಾಸದಲ್ಲಿದ್ದಾರೆ. ಮತದಾನ ಮುಗಿದ ನಂತರ ಖಚಿತ ಗೆಲುವಿನ ಮಾತನ್ನು ಅವರು ಮತ್ತು ಅವರ ಕುಟುಂಬ ಆಡುತ್ತಿದೆ. ಬಿಜೆಪಿಯ ಭದ್ರಕೋಟೆಯಾಗಿರುವ ಬೆಳಗಾವಿ ಬಿಜೆಪಿಯ ಭದ್ರಕೋಟೆಯಾಗಿರುವ ಬೆಳಗಾವಿ ಬಿಜೆಪಿಯ ಭದ್ರಕೋಟೆಯಾಗಿರುವ ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ಹೊರತಾಗಿ ಯಾವ ಅಭ್ಯರ್ಥಿಯನ್ನು ನಿಲ್ಲಿಸಿದರೂ, ಲಕ್ಷಾಂತರ ವೋಟ್ ನಲ್ಲಿ ಸೋಲುವುದು ಖಚಿತ ಎನ್ನುವುದನ್ನು ಕಾಂಗ್ರೆಸ್ ಅರ್ಥ ಮಾಡಿಕೊಂಡಿತ್ತು.
ಹಾಗಾಗಿ, ಉಮೇದುವಾರಿಕೆಯಲ್ಲಿ ಮನಸ್ಸಿಲ್ಲದ ಜಾರಕಿಹೊಳಿಯವರನ್ನು ಹೈಕಮಾಂಡ್ ಅವರೇ ಮನವೊಲಿಸಬೇಕಾಯಿತು. ದೊಡ್ದವರ ಮಾತಿಗೆ ಒಲ್ಲೆ ಎನ್ನದ ಸತೀಶ್ ಅವರು ಕಾಂಗ್ರೆಸ್ ಅಭ್ಯರ್ಥಿಯಾದರು. ಸಹೋದರನ ಸಿಡಿ ಪ್ರಕರಣ


Spread the love

About Laxminews 24x7

Check Also

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Spread the love ಬೀದರ್: ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ