ಬೆಳಗಾವಿ; ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ 14 ದಿನಗಳ ಕಾಲ ಲಾಕ್ ಡೌನ್ ಮಾದರಿಯ ಕರ್ಫ್ಯೂ ಜಾರಿಗೆ ತಂದಿದೆ. ಕರ್ಫ್ಯೂ ಜಾರಿಯಲ್ಲಿದ್ದರೂ ಜನರು ಮಾತ್ರ ನಿಯಮಗಳನ್ನು ಉಲ್ಲಂಘನೆ ಮಾಡಿ ಬೇಕಾಬಿಟ್ಟಿ ಓಡಾಟ ನಡೆಸುತ್ತಿದ್ದಾರೆ.
ಸರ್ಕಾರ ಜಾರಿಗೆ ತಂದಿರುವ ಬಿಗಿ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇದು ಆಯಾ ಜಿಲ್ಲಾಡಳಿತದ ಜವಾಬ್ದಾರಿ ಎಂದು ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಿಲ್ಲಾಧಿಕಾರಿಗಳಿಗೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಆದಾಗ್ಯೂ ಕೂಡ ಜಿಲ್ಲಾಡಳಿತವಾಗಲಿ, ಪೊಲೀಸರಾಗಲಿ ಎಚ್ಚೆತ್ತುಕೊಂಡಂತಿಲ್ಲ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೋವಿಡ್ ನಿಯಮ, ಕರ್ಫ್ಯೂ ಉಲ್ಲಂಘಿಸಿ ಜನರು ರಾಜಾರೋಷವಾಗಿ ಓಡಾಟ ನಡೆಸುತ್ತಿದ್ದಾರೆ. ಆದರೂ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ.
ಈ ನಡುವೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೂಡ ಜನರು ವಾಹನಗಳಲ್ಲಿ ಅನಗತ್ಯವಾಗಿ ಓಡಾಟ ನಡೆಸುತ್ತಿದ್ದು, ಅಶೋಕ ನಗರ ವೃತ್ತದಲ್ಲಿ ಬೇಕಾಬಿಟ್ಟಿಯಾಗಿ ಓಡಾಟ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದು, ವಾಹನಗಳನ್ನು ಸೀಜ್ ಮಾಡಿರುವ ಘಟನೆ ನಡೆದಿದೆ.
ಇನ್ನು ಕಲಬುರ್ಗಿಯಲ್ಲಿಯೂ ಮನೆಯಿಂದ ಹೊರಬಂದು ಅನಗತ್ಯವಾಗಿ ರಸ್ತೆಗಿಳಿದವರ ಮೇಲೆ ಪೊಲಿಸರು ಲಾಠಿ ಬೀಸಿದ್ದಾರೆ.
Laxmi News 24×7