Breaking News

ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಜನಾಭಿಪ್ರಾಯ ಕಳೆದುಕೊಂಡಿದೆ.ಸರ್ಕಾರ ವಿಸರ್ಜನೆ ಮಾಡಿ ಚುನಾವಣೆಗೆ ಹೋಗುವುದು ಉತ್ತಮ :

Spread the love

ಬೆಂಗಳೂರು: ನಗರ ಸ್ಥಳಿಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಭರ್ಜರಿ ಗೆಲವಿಗೆ ಕಾರಣರಾದ ಮತದಾರರಿಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಜನಾಭಿಪ್ರಾಯ ಕಳೆದುಕೊಂಡಿರುವುದು ಈ ಚುನಾವಣೆ ಫಲಿತಾಂಶದಿಂದ ಸ್ಪಷ್ಟವಾಗಿದೆ. ಕೋವಿಡ್‍ನಂತಹ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಹೀಗಾಗಿ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

ಜನತೆಯ ಕೆಂಗಣ್ಣಿಗೆ ಗುರಿಯಾಗಿರುವುದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸರ್ಕಾರ ವಿಸರ್ಜನೆ ಮಾಡಿ ಚುನಾವಣೆಗೆ ಹೋಗುವುದು ಉತ್ತಮ ಎಂದು ಸಿದ್ದರಾಮಯ್ಯ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಪಕ್ಷದ ಅಭ್ಯರ್ಥಿಗಳನ್ನು ಸಿದ್ದರಾಮಯ್ಯ ಅವರು ಅಭಿನಂದಿಸಿದ್ದಾರೆ. ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಪಕ್ಷದ ಮುಖಂಡರು, ಕಾರ್ಯಕರ್ತರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. ಆಶೀರ್ವಾದ ಮಾಡಿರುವ ಮತದಾರರ ನಿರೀಕ್ಷೆ ಹುಸಿಯಾಗದ ರೀತಿಯಲ್ಲಿ ಕೆಲಸ ಮಾಡಿ ಎಂದು ಗೆಲುವು ಸಾಧಿಸಿರುವ ಅಭ್ಯರ್ಥಿಗಳಿಗೆ ಸಿದ್ದರಾಮಯ್ಯ ಅವರು ಕಿವಿಮಾತು ಹೇಳಿದ್ದಾರೆ.


Spread the love

About Laxminews 24x7

Check Also

ಸಿಂಗಾಪುರ್ ಮಾದರಿಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಅಭಿವೃದ್ಧಿ: ರಾಮಲಿಂಗಾ ರೆಡ್ಡಿ

Spread the loveಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು  ಸಿಂಗಾಪುರ್‌ಗಿಂತಲೂ ಉತ್ತಮವಾದ ಅಂತಾರಾಷ್ಟ್ರೀಯ ಬಸ್ ನಿಲ್ದಾಣ ಮಾಡೋದಾಗಿ ಸಾರಿಗೆ ಸಚಿವ ರಾಮಲಿಂಗಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ