Breaking News

ನಾಳೆ ಬೆಳಗಾವಿ ಲೋಕಸಭಾ ಉಪಚುನಾವಣೆ ಫಲಿತಾಂಶ : ಮತ ಎಣಿಕೆ ಕೇಂದ್ರಕ್ಕೆ ಬರುವವರಿಗೆ ‘ಕೊರೋನಾ ನೆಗೆಟಿವ್’ ವರದಿ ಕಡ್ಡಾಯ

Spread the love

ಬೆಳಗಾವಿ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ನಡುವೆ ಮೇ. 2 ಕ್ಕೆ ಬೆಳಗಾ ಲೋಕಸಭೆ ಉಪಚುನಾವಣೆಯ ಮತ ಎಣಿಕೆ ನಡೆಯಲಿದ್ದು, ಮತ ಎಣಿಕೆ ಕೇಂದ್ರ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ.

ಮೇ. 2 ರಂದು ಮತ ಎಣಿಕೆ ಕೇಂದ್ರಕ್ಕೆ ಬರುವವರಿಗೆ ಆರ್ ಟಿ ಪಿಸಿಆರ್ ಪರೀಕ್ಷಾ ವರದಿ ಕಡ್ಡಾಯ ಮಾಡಿ ಜಿಲ್ಲಾ ಚುನಾವಣಾಧಿಕಾರಿ ಆದೇಶ ಹೊರಡಿಸಿದ್ದಾರೆ.ಕೊರೊನಾ ಮಾರ್ಗಸೂಚಿಯ ಪ್ರಕಾರ ಮತ ಎಣಿಕೆ ಕಾರ್ಯ ನಡೆಸಲು ಸಿದ್ದತೆ ನಡೆದಿದ್ದು, ಮತ ಎಣಿಕೆ ಕೇಂದ್ರ ಪ್ರವೇಶಿಸುವ ಅಭ್ಯರ್ಥಿಗಳು, ಮತ ಎಣಿಕೆ ಸಿಬ್ಬಂದಿ, ಮತ ಎಣಿಕೆ ಏಜೆಂಟರು ಹಾಗೂ ಮಾಧ್ಯಮ ಪ್ರತಿನಿಧಿಗಳು ಸೇರಿದಂತೆ ಮತ ಎಣಿಕೆ ಕೇಂದ್ರ ಪ್ರವೇಶಿಸುವ ಪ್ರತಿಯೊಬ್ಬರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 14 ದಿನಗಳ ಕಾಲ ಜನತಾ ಕರ್ಪ್ಯೂ ವಿಧಿಸಿದೆ.ಕೇಂದ್ರ ಸಚಿವ ಸುರೇಶ ಅಂಗಡಿ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 17ರಂದು ಉಪಚುನಾವಣೆ ನಡೆದಿತ್ತು. ಚುನಾವಣೆ ಮತ ಎಣಿಕೆ ಮೇ 2ರಂದು ನಡೆಯಲಿದ್ದು, ಇದಕ್ಕಾಗಿ ಚುನಾವಣಾ ಆಯೋಗ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ