Breaking News
Home / ರಾಜ್ಯ / ದ್ರಾವಿಡ ನಾಡಿನಲ್ಲಿ ಸ್ಟಾಲಿನ್ ಓಟ ಜೋರು: ಸಿಎಂ ಆಗಿ ಅಧಿಕಾರ ಸ್ವೀಕರಿಸಲು ಮುಹೂರ್ತ ಫಿಕ್ಸ್

ದ್ರಾವಿಡ ನಾಡಿನಲ್ಲಿ ಸ್ಟಾಲಿನ್ ಓಟ ಜೋರು: ಸಿಎಂ ಆಗಿ ಅಧಿಕಾರ ಸ್ವೀಕರಿಸಲು ಮುಹೂರ್ತ ಫಿಕ್ಸ್

Spread the love

ಚೆನ್ನೈ: ಕರುಣಾನಿಧಿ- ಜಯಲಲಿತಾ ಇಲ್ಲದೆ ನಡೆದ ಮೊದಲ ತಮಿಳುನಾಡು ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದೆ. 234 ವಿಧಾನಸಭೆ ಕ್ಷೇತ್ರಗಳಲ್ಲಿ ಸ್ಟಾಲಿನ್ ನೇತೃತ್ವದ ಡಿಎಂಕೆ ಮುನ್ನಡೆ ಸಾಧಿಸಿದೆ.

ಇದುವರೆಗಿನ ಮತ ಎಣಿಕೆಯಲ್ಲಿ ಡಿಎಂಕೆ ಮೈತ್ರಿಕೂಟ 141 ಸ್ಥಾನ, ಎಐಎಡಿಎಂಕೆ ಕೂಟ 87 ಸ್ಥಾನ, ಇತರರು ಆರು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ತಮಿಳುನಾಡು ವಿಧಾನಸಭೆಯಲ್ಲಿ ಅಧಿಕಾರ ಪಡೆಯಬೇಕಾದರೆ 118 ಸ್ಥಾನಗಳನ್ನು ಗೆಲ್ಲಬೇಕು. ಡಿಎಂಕೆ ಪಕ್ಷದ ಗೆಲುವು ಬಹುತೇಕ ಖಚಿತವಾಗುತ್ತಿದ್ದು, ಎಂ.ಕೆ.ಸ್ಟಾಲಿನ್ ತಮಿಳುನಾಡು ಮುಖ್ಯಮಂತ್ರಿಯಾಗುವ ಸಿದ್ದತೆಯಲ್ಲಿದ್ದಾರೆ.

ಮೇ 6 ರಂದು ತಮಿಳುನಾಡು ಮುಖ್ಯಮಂತ್ರಿಯಾಗಿ ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.

ಕೊಲತೂರ್ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಸ್ಟಾಲಿನ್ 16,031 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಕೂಡಾ ಮುನ್ನಡೆ ಸಾಧಿಸಿದ್ದಾರೆ. ನಟರಾದ ಕಮಲ್ ಹಾಸನ್ ಮುನ್ನಡೆಯಲ್ಲಿದ್ದರೆ, ಬಿಜೆಪಿಯಿಂದ ಸ್ಪರ್ಧಿಸಿರುವ ಖುಷ್ಬೂ ಹಿನ್ನಡೆಯಲ್ಲಿದ್ದಾರೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ