Breaking News

ಮತ ಎಣಿಕೆ ಸಮಯದಲ್ಲಿ ಗಲಾಟೆ : ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಸಹೋದರ ಪೊಲೀಸರ ವಶ!

Spread the love

ರಾಯಚೂರು: ಮತ ಎಣಿಕೆ ಮಾಹಿತಿ ಸಮರ್ಪಕವಾಗಿ ನೀಡುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ ಮಸ್ಕಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಸಹೋದರನನ್ನು ಪೊಲೀಸರು ವಶಕ್ಕೆ ಪಡೆದು ಕೋಣೆಯಲ್ಲಿ ಕೂರಿಸಿರುವ ಘನಟೆ ನಡೆದಿದೆ.

ಬಸನಗೌಡ ತುರ್ವಿಹಾಳ ಸಹೋದರ ಸಿದ್ದನಗೌಡ ತುರ್ವಿಹಾಳ ಕರ್ತವ್ಯನಿರತ ಪೊಲೀಸರ ಜತೆ ಮಾತಿನ ಚಕಮಕಿ ನಡೆಸಿದರು. ಈ ವೇಳೆ ಡಿಸಿ ಆರ್.ವೆಂಕಟೇಶಕುಮಾರ್ ಮಧ್ಯಪ್ರವೇಶಿಸಿ ಅವರನ್ನು ವಶಕ್ಕೆ ಪಡೆಯಿರಿ ಎಂದು ಸೂಚಿಸಿದರು. ಬಳಿಕ ಪೊಲೀಸರು ಅವರನ್ನು ನ್ಯೂಸ್ ರೂಂ ಕರೆದಯೊಯ್ದು ಕೂಡಿಸಿದರು. ಈ ವೇಳೆ ಮಾತನಾಡಿದ ಸಿದ್ದನಗೌಡ, ಅಧಿಕಾರಿಗಳಿಗೆ ಕೇಳಿದರೆ ಸರಿಯಾದ ಮಾಹಿತಿಯನ್ನು ಕೊಡುತ್ತಿಲ್ಲ ಎಂದು ದೂರಿದರು.

ಇನ್ನು ರಾಜ್ಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾದ ರಾಜ್ಯ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಮಸ್ಕಿ ಚುನಾವಣೆಯಲ್ಲಿ ಕಾಂಗ್ರೆಸ್ ಸತತ ಮುನ್ನಡೆ ಕಾಯ್ದುಕೊಂಡಿದೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ