Breaking News

ಬೆಳಗಾವಿಯಲ್ಲಿ ಬದಲಾದ ಚಿತ್ರಣ ; ಮಂಗಳಾ ಅಂಗಡಿಗೆ ಹಿನ್ನಡೆ, ಜಾರಕಿಹೊಳಿಗೆ ಮುನ್ನಡೆ

Spread the love

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಆರರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಮುನ್ನಡೆ ಗಳಿಸಿದ್ದಾರೆ. ಎರಡರಲ್ಲಿ ಮಾತ್ರ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅವರು ಬೆಳಗಾವಿ ದಕ್ಷಿಣ ಹಾಗೂ ಗೋಕಾಕ ವಿಧಾನಸಭಾ ಕ್ಷೇತ್ರಗಳಲ್ಲಿ ಮಾತ್ರ ಮುಂದಿದ್ದಾರೆ.

ಉಳಿದಂತೆ ಅರಭಾವಿ, ಬೆಳಗಾವಿ ಉತ್ತರ, ಬೆಳಗಾವಿ ಗ್ರಾಮೀಣ, ಬೈಲಹೊಂಗಲ, ಸವದತ್ತಿ- ಯಲ್ಲಮ್ಮ ಹಾಗೂ ರಾಮದುರ್ಗದಲ್ಲಿ ಕಾಂಗ್ರೆಸ್ ಮುನ್ನಡೆ ಕಂಡಿದೆ.ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಗಿಂತಲೂ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಹಾಗೂ ಶಿವಸೇನಾ ಬೆಂಬಲಿತ ಅಭ್ಯರ್ಥಿ ಶುಭಂ ಶೆಳಕೆ ಹೆಚ್ಚು ಮತಗಳನ್ನು (ಈವರೆಗೆ ) ಪಡೆದಿದ್ದಾರೆ. ಈ ವೇಳೆ ಕಾಂಗ್ರೆಸ್‌ನ ಸತೀಶ ಜಾರಕಿಹೊಳಿ 264187 ಹಾಗೂ ಬಿಜೆಪಿಯ ಮಂಗಲಾ ಅಂಗಡಿ 256824 ಮತಗಳನ್ನು ಗಳಿಸಿದ್ದಾರೆ. ಸತೀಶ 7363 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಅಂತರವು ಐದಂಕಿಯಿಂದ ನಾಲ್ಕಂಕಿಗೆ ಇಳಿಕೆಯಾಗಿದೆ.


Spread the love

About Laxminews 24x7

Check Also

ಕಣ್ಣಿನ ಚಿಕಿತ್ಸೆಗೆ ಮಾಧುರಿ ಜಾಧವ್ ಫೌಂಡೇಶನ್ ಮೂಲಕ ಚೆಕ್ ಹಸ್ತಾಂತರ

Spread the loveಬೆಳಗಾವಿ: ಪಟಾಕಿ ಸ್ಫೋಟದಲ್ಲಿ ಕಣ್ಣು ಕಳೆದುಕೊಂಡ ಶಹಾಪುರದ ಶಿವ ಲೋಹರ್ ಅವರ ಚಿಕಿತ್ಸೆಗೆ ಸಹಾಯದ ಮಹಾಪೂರ ಹರಿದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ