Breaking News

ರಾಜ್ಯದ ಜನರಿಗೆ ಶಾಕ್ ನೀಡಿದ ವೈದ್ಯರು; ಸೋಂಕಿತರ ಸಂಖ್ಯೆ ಇನ್ನೂ ಏರಿಕೆಯಾಗಲಿದೆಯಂತೆ..!!!

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯು ಜೋರಾಗಿದ್ದು, ಇದು ಇನ್ನೂ 15 ದಿನಗಳ ಕಾಲ ಹೀಗೆ ಮುಂದುವರೆಯುತ್ತದೆ ಎಂದು ಹೇಳುವ ಮೂಲಕ ಮಣಿಪಾಲ ಆಸ್ಪತ್ರೆಗಳ ಮುಖ್ಯಸ್ಥ ಡಾ. ಸುದರ್ಶನ್ ಬಲ್ಲಾಳ್ ರಾಜ್ಯದ ಜನರಿಗೆ ಶಾಕ್ ಕೊಟ್ಟಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಕೋವಿಡ್ 2 ನೇ ಅಲೆಯ ತೀಕ್ಷ್ಣತೆ ಇನ್ನೂ 15 ದಿನ ಇರಲಿದ್ದು, ನಂತರ ಕಡಿಮೆಯಾಗಬಹುದು. ಕೊರೊನಾದ 2 ನೇ ಅಲೆಯು ಬಹಳ ವೇಗವಾಗಿ ವ್ಯಾಪಿಸುತ್ತಿದ್ದು, ಇನ್ನೂ 15 ದಿನಗಳ ಕಾಲ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಹೆಚ್ಚಾಗಲಿದೆ. ಜೂನ್, ಜುಲೈನಲ್ಲಿ ಕಳೆದ ನವೆಂಬರ್, ಡಿಸೆಂಬರ್ ನಲ್ಲಿದ್ದ ಸ್ಥಿತಿ ಇರಲಿದೆ ಎಂದು ಹೇಳಿದ್ದಾರೆ.

ಈ ಕೊರೊನಾ ಎರಡನೇ ಅಲೆಯು ಜುಲೈನಲ್ಲಿ ಕಡಿಮೆಯಾದರೂ, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ 3 ನೇ ಅಲೆ ದಾಳಿ ಇಡಲಿದೆ. ಹಾಗಾಗಿ ಜನರು ಮೈಮರೆಯದೇ ಮುಂಜಾಗ್ರತಾ ಕ್ರಮ ವಹಿಸಿಕೊಳ್ಳಬೇಕು. ಮಾಸ್ಕ್ ಧರಿಸುವುದನ್ನ ಬಿಡಬಾರದು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಕೈ ತೊಳೆಯುವುದು ಯಾವುದನ್ನೂ ಬಿಡಬಾರದು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ