Breaking News

ಆಕ್ಸಿಜನ್ ಕೊರತೆಗೆ ಸರ್ಕಾರ ಕಾರಣ ಅಲ್ಲ: ಸಚಿವ ಸೋಮಶೇಖರ್ ಉಡಾಫೆ ಉತ್ತರ

Spread the love

ಬೆಂಗಳೂರು. ಆಕ್ಸಿಜನ್ ಕೊರತೆಗೆ ಸರ್ಕಾರ ಕಾರಣ ಅಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ಉಡಾಫೆ ಉತ್ತರ ನೀಡಿದ್ದಾರೆ.

ಆರೋಗ್ಯ ಸಚಿವ ಸುಧಾಕರ್ ಅವರನ್ನ ಭೇಟಿಯಾದ ನಂತರ ಎಸ್.ಟಿ.ಸೋಮಶೇಖರ್ ಮಾಧ್ಯಮಗಳ ಜೊತೆ ಮಾತನಾಡಿ, ಎಲ್ಲರಂತೆ ಸರ್ಕಾರವನ್ನು ಸಮರ್ಥಿಸಿಕೊಂಡರು. ಸಂಜೆ ಸಭೆ ಬಳಿಕ ಅಲ್ಲಿ ಚರ್ಚೆ ಮಾಡುತ್ತೇವೆ. ಆಕ್ಸಿಜನ್ ಕೊರತೆ ಆಗದಂತೆ ನೋಡಿಕೊಳ್ಳಲು ನೋಡಲ್ ಅಧಿಕಾರಿಗಳು ಇರ್ತಾರೆ. ಅವರು ಕೆಲಸ ಮಾಡದೇ ಹೋದ್ರೆ ಸರ್ಕಾರಕ್ಕೆ ಕೆಟ್ಟ ಹೆಸರು. ಅಧಿಕಾರಿಗಳ ನಿರ್ಲಕ್ಷ್ಯ ಇದರಲ್ಲಿದೆ ಎಂದು ಹೇಳಿ ಜಾರಿಕೊಂಡರು.ಎರಡು ಗಂಟೆಗೆ ಆಕ್ಸಿಜನ್ ಖಾಲಿ ಆಗುತ್ತೆ ಗೊತ್ತಿದ್ರೆ, 12 ಗಂಟೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಅಧಿಕಾರಿಗಳು ಕೆಲಸ ಮಾಡಿಲ್ಲ ಎಂದು ಹೇಳಿ ಕಾರ್ ಹೋದರು. ಇತ್ತ ಆರೋಗ್ಯ ಸಚಿವ ಕೆ. ಸುಧಾಕರ್, ಕಲಬುರಗಿ ಆಕ್ಸಿಜನ್ ದುರಂತಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ