Breaking News

ಚಾಮರಾಜನಗರ ದುರಂತ: ಆರೋಗ್ಯ ಸಚಿವರ ತಪ್ಪಿದ್ದರೆ ಕ್ರಮ ಜರುಗಿಸಲಿ -ಸಿ.ಟಿ.ರವಿ

Spread the love

ಬೆಂಗಳೂರು: ‘ಚಾಮರಾಜನಗರ ದುರಂತಕ್ಕೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಕ್ರಮ ಆಗಲೇ ಬೇಕು. ಒಂದು ವೇಳೆ ಸರ್ಕಾರ ನಿರ್ಲಕ್ಷ್ಯ ವಹಿಸಿದ್ದರೆ ಅದರ ಹೊಣೆಯನ್ನು ಸರ್ಕಾರ ಹೊರಬೇಕಾಗುತ್ತದೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

‘ಈ ದುರಂತಕ್ಕೆ ಕಾರಣರಾದವರಿಗೆ ಕಠಿಣ ಕ್ರಮ ಜರುಗಿಸಿದಾಗ ಮಾತ್ರ ಇಂತಹ ಘಟನೆಗಳು ಮರುಕಳಿಸುವುದನ್ನು ತಪ್ಪಿಸಬಹುದು. ಆರೋಗ್ಯ ಸಚಿವರು ತಪ್ಪು ಮಾಡಿದ್ದರೆ ಅವರ ವಿರುದ್ಧವೂ ಕ್ರಮ ಆಗಬೇಕು. ಕೂಡಲೇ ತನಿಖೆ ನಡೆಸಿ ಶಿಸ್ತು ಕ್ರಮ ತೆಗೆದುಕೊಳ್ಳಲು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ’ ಎಂದು ಅವರು ಸುದ್ದಿಗಾರರಿಗೆ ಹೇಳಿದರು.

‘ಮುಖ್ಯಮಂತ್ರಿಯವರ ಜತೆ ವಿವಿಧ ಜಿಲ್ಲೆಗಳ ಆಕ್ಸಿಜನ್‌ ಕೊರತೆ ಬಗ್ಗೆಯೂ ಚರ್ಚಿಸಿದ್ದೇನೆ. ವಿವಿಧ ರಾಜ್ಯಗಳಲ್ಲಿ ನಡೆದ ದುರ್ಘಟನೆಗಳು ನಮಗೆ ಪಾಠ ಆಗಬೇಕಿತ್ತು. ಇಂದು ನಮ್ಮ ರಾಜ್ಯದಲ್ಲೂ ದುರಂತ ಸಂಭವಿಸಿದೆ. ಜನರು ಜೀವ ಕೈಯಲ್ಲಿ ಹಿಡಿದು ಬದುಕಬೇಕಾದ ಸ್ಥಿತಿ ಇದೆ’ ಎಂದೂ ತಿಳಿಸಿದರು.

‘ಆಮ್ಲಜನಕದ ಸರಬರಾಜಿನ ವಿಚಾರದಲ್ಲಿ ಸರ್ಕಾರ ಯ ಕೂಡಲೇ ಮಧ್ಯ ಪ್ರವೇಶಿಸಲೇ ಬೇಕು. ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿ, ಸಮರೋಪಾದಿಯಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ