Breaking News

ಚಾಮರಾಜನಗರ ದುರಂತ’ ಬೆನ್ನಲ್ಲೇ ಆರೋಗ್ಯ ಸಚಿವರ ಎಲ್ಲಾ ಜವಾಬ್ದಾರಿ ಕಿತ್ತುಕೊಂಡ ‘ಸಿಎಂ ಯಡಿಯೂರಪ್ಪ’

Spread the love

ಬೆಂಗಳೂರು : ಚಾಮರಾಜನಗರದಲ್ಲಿ ನಡೆದ ಆಕ್ಸಿಜನ್ ದುರಂತ ಪ್ರಕರಣದ ಹಿನ್ನೆಲೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಆಗ್ರಹಿಸಿದ್ದವು. ಚಾಮರಾಜನಗರ ದುರಂತಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಈ ಬೆನ್ನಲ್ಲೇ ಸಿಎಂ ಬಿ ಎಸ್ ಯಡಿಯೂರಪ್ಪ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಆರೋಗ್ಯ ಸಚಿವ ಡಾ.ಸುಧಾಕರ್ ನೀಡಿದ್ದ ಎಲ್ಲಾ ಜವಾಬ್ದಾರಿಯನ್ನು ಸಿಎಂ ವಾಪಸ್ ತೆಗೆದುಕೊಂಡಿದ್ದಾರೆ.

ಯೆಸ್, ಆರೋಗ್ಯ ಸಚಿವ ಡಾ, ಸುಧಾಕರ್ ಗೆ ಆರೋಗ್ಯ ಖಾತೆಯೊಂದೇ ಉಳಿದಿದ್ದು, ಕೊರೊನಾ ನಿಯಂತ್ರಣ ಸಂಬಂಧ ನೀಡಿದ್ದ ಎಲ್ಲಾ ಜವಾಬ್ದಾರಿಯನ್ನು ಸಿಎಂ ವಾಪಸ್ ತೆಗೆದುಕೊಂಡಿದ್ದಾರೆ.

ಬದಲಾಗಿ ಜಗದೀಶ್ ಶೆಟ್ಟರ್ ಆಕ್ಸಿಜನ್ ಜವಾಬ್ದಾರಿ ನೀಡಿದರೆ, ಡಿಸಿಎಂ ಅಶ್ವಥ್ ನಾರಾಯಣ್ ಗೆ ಔಷಧ ಕೊರತೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನೀಡಿದ್ದಾರೆ. ಜೊತೆಗೆ ಸರ್ಕಾರಿ , ಖಾಸಗಿ ಆಸ್ಪತ್ರೆಗಳ ಬೆಡ್ ವ್ಯವಸ್ಥೆ ನೋಡಿಕೊಳ್ಳುವ ಹೊಣೆ ಸಚಿವ ಆರ್ ಅಶೋಕ್ ಹಾಗೂ ಬೊಮ್ಮಾಯಿಗೆ ವಹಿಸಲಾಗಿದೆ. ಉಳಿದ ವಾರ್ ರೂಂ ಜವಾಬ್ದಾರಿಯನ್ನು ಅರವಿಂದ ಲಿಂಬಾವಳಿಗೆ ನೀಡಿದ್ದಾರೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ