Breaking News

ಬೆಡ್​ ಬ್ಲಾಕಿಂಗ್ ದಂಧೆ ನಡೆಸುತ್ತಿದ್ದ ಇಬ್ಬರ ಬಂಧನ; ಸಂಸದ-ಶಾಸಕರು ಪ್ರಕರಣ ಬಯಲಿಗೆಳೆದ ಬೆನ್ನಿಗೇ ಎಫ್​ಐಆರ್

Spread the love

ಬೆಂಗಳೂರು: ರಾಜ್ಯದ ಒಟ್ಟಾರೆ ಸೋಂಕಿನ ಪೈಕಿ ಅತಿಹೆಚ್ಚು ರಾಜ್ಯದ ರಾಜಧಾನಿಯಲ್ಲೇ ಇದ್ದು, ಸೋಂಕಿತರು ಸರಿಯಾದ ಸಮಯಕ್ಕೆ ಹಾಸಿಗೆ, ಐಸಿಯು, ಆಕ್ಸಿಜನ್ ಸಿಗದೆ ಒದ್ದಾಡುತ್ತಿದ್ದರೆ ಒಂದಷ್ಟು ಮಂದಿ ಇಂಥ ಸಂದರ್ಭದಲ್ಲೂ ಬೆಡ್ ಬ್ಲಾಕಿಂಗ್ ಮಾಡಿಸಿ ಹಣ ಮಾಡಿಕೊಳ್ಳುತ್ತಿದ್ದಾರೆ. ಅಂಥ ಪ್ರಕರಣವನ್ನು ಸಂಸದ-ಶಾಸಕರು ಜತೆಯಾಗಿ ಬಯಲಿಗೆಳೆದ ಬೆನ್ನಿಗೇ ಇಬ್ಬರು ಆರೋಪಿಗಳ ಬಂಧನವಾಗಿದೆ.

ಬೆಡ್​ ಬ್ಲಾಕಿಂಗ್ ದಂಧೆಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ರೋಹಿತ್ ಮತ್ತು ನೇತ್ರಾ ಎಂಬಿಬ್ಬರು ಏಜೆಂಟ್​ಗಳನ್ನು ಬಂಧಿಸಿದ್ದಾರೆ. ಬೆಡ್​ ಬ್ಲಾಕಿಂಗ್ ಬಗ್ಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಿಗಳ ಮೇಲೆ ಎಫ್​ಐಆರ್ ದಾಖಲಿಸಲಾಗಿದೆ.

ಈ ದಂಧೆಯ ಹಿಂದೆ ಇವರಿಬ್ಬರಲ್ಲದೆ ಇನ್ನೂ ಕೆಲವರು ಇರುವ ಶಂಕೆ ಇದ್ದು, ಪೊಲೀಸರು ಮತ್ತಷ್ಟು ತನಿಖೆಗೆ ಮುಂದಾಗಿದ್ದಾರೆ. ಬೆಡ್​ ಬ್ಲಾಕಿಂಗ್ ದಂಧೆಯನ್ನು ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ರವಿಸುಬ್ರಹ್ಮಣ್ಯ, ಸತೀಶ್ ರೆಡ್ಡಿ, ಉದಯ್ ಗರುಡಾಚಾರ್ ಅವರು ಪೊಲೀಸರೊಂದಿಗೆ ಸ್ಥಳಕ್ಕೇ ತೆರಳಿ ಬಯಲಿಗೆಳೆದಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ