ಮೈಸೂರು: ಕಾಳ ಸಂತೆಯಲ್ಲಿ ಆಕ್ಸಿಜನ್ ಸಿಲಿಂಡರನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಪ್ರಕರಣವೊಂದು ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. ನಂಜನಗೂಡು ಸಮೀಪದ ಪೆಟ್ರೋಲ್ ಬಂಕ್ ಬಳಿ ದಾಖಲೆ ಇಲ್ಲದೆ, ಅಕ್ರಮವಾಗಿ ಆಕ್ಸಿಜನ್ ಸಿಲಿಂಡರ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಮಧುಕುಮಾರ್(37) ಎಂಬ ಆರೋಪಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಂಜನಗೂಡು ತಾಲೂಕು ಹೊಸಕೋಟೆಯ ಮಧುಕುಮಾರ್ ಎನ್ನುವ ವ್ಯಕ್ತಿ ಅಕ್ರಮವಾಗಿ ಆಕ್ಸಿಜನ್ ಮಾರಾಟ ಮಾಡುತ್ತಿದ್ದ. ಆರೋಪಿ ಬಳಿ ಇದ್ದ ತುಂಬಿದ ಆಕ್ಸಿಜನ್ ಸಿಲಿಂಡರ್ ವಶಕ್ಕೆ ಪಡೆದಿರುವ ಪೊಲೀಸರು ಈ ಘಟನೆ ಸಂಬಂಧ ವಿದ್ಯಾರಣ್ಯಪುರಂ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Laxmi News 24×7