Home / ಜಿಲ್ಲೆ / ಬೆಳಗಾವಿ / ಚುನಾವಣಾ ಪ್ರಚಾರದ ವೆಳೆ ಸಿಎಂ ಪ್ರಾಥಮಿಕ ಸಂಪರ್ಕದಲ್ಲಿದ್ದ ಹೋಟೆಲ್ ಸಿಬ್ಬಂದಿ ಬೆಳಗಾವಿಯ ಹೋಟೆಲ್ ನ 12 ಸಿಬ್ಬಂದಿಗೆ ಇದೀಗ ಕೊರೊನಾ ಸೋಂಕು ಪತ್ತೆ

ಚುನಾವಣಾ ಪ್ರಚಾರದ ವೆಳೆ ಸಿಎಂ ಪ್ರಾಥಮಿಕ ಸಂಪರ್ಕದಲ್ಲಿದ್ದ ಹೋಟೆಲ್ ಸಿಬ್ಬಂದಿ ಬೆಳಗಾವಿಯ ಹೋಟೆಲ್ ನ 12 ಸಿಬ್ಬಂದಿಗೆ ಇದೀಗ ಕೊರೊನಾ ಸೋಂಕು ಪತ್ತೆ

Spread the love

ಬೆಳಗಾವಿ: ಕೆಲ ದಿನಗಳ ಹಿಂದೆ ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದರು. ಅಂದು ಸಿಎಂ ಯಡಿಯೂರಪ್ಪನವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಬೆಳಗಾವಿಯ ಹೋಟೆಲ್ ನ 12 ಸಿಬ್ಬಂದಿಗೆ ಇದೀಗ ಕೊರೊನಾ ಸೋಂಕು ಪತ್ತೆಯಾಗಿದೆ.

 

ಏಪ್ರಿಲ್ 16ರಂದೆ ಈ ಸಿಬ್ಬಂದಿಗಳ ಗಂಟಲು ಮಾದರಿ ಪರೀಕ್ಷೆಗೆ ಕಳುಹಿಸಲಾಗಿತ್ತಾದರೂ 20 ದಿನಗಳ ಬಳಿಕ ವರದಿ ಬಂದಿದ್ದು, ಇದೀಗ 12 ಜನರಲ್ಲಿ ಸೋಂಕು ದೃಢ್ಪಟ್ಟಿದೆ. ಇವರ ಸಂಪರ್ಕಕ್ಕೆ ಬಂದವರಿಗೂ ಸೋಂಕು ಹರಡಿರುವ ಭೀತಿ ಎದುರಾಗಿದೆ.ಏಪ್ರಿಲ್ 14, 15ರಂದು ಸಿಎಂ ಯಡಿಯೂರಪ್ಪ ಬೆಳಗಾವಿಯಲ್ಲಿ ಚುನಾವಣಾ ಪ್ರಚಾರ ನಡೆಸಿದ್ದರು. ಸುಮಾರು 40ಕ್ಕೂ ಹೆಚ್ಚು ಜನರು ಸಿಎಂ ಸಂಪರ್ಕದಲ್ಲಿದ್ದು, ಎಲ್ಲರನ್ನೂ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರ ವರದಿ ಮಾತ್ರ ಈಗ ತಡವಾಗಿ ಬಂದಿದ್ದು, ಹಲವರಲ್ಲಿ ಸೋಂಕು ದೃಢಪಟ್ಟಿದೆ.


Spread the love

About Laxminews 24x7

Check Also

ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

Spread the love ವಿಜಯಪುರ: ದೇಶದಲ್ಲಿ ಪ್ರಜ್ಞಾವಂತ ಮತದಾರರಿದ್ದು, ಲೋಕಸಭೆಗೆ ಯಾರಿಗೆ ಮತ ಹಾಕಬೇಕು, ವಿಧಾನಸಭೆಗೆ ಏನು ನಿರ್ಣಯ ಕೈಗೊಳ್ಳಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ