Breaking News
Home / ರಾಜಕೀಯ / ಶಾಕಿಂಗ್‌ ನ್ಯೂಸ್: ಕೊರೊನಾಗೆ ಮತ್ತೊಬ್ಬ ನಟಿ ಬಲಿ

ಶಾಕಿಂಗ್‌ ನ್ಯೂಸ್: ಕೊರೊನಾಗೆ ಮತ್ತೊಬ್ಬ ನಟಿ ಬಲಿ

Spread the love

ದೇಶದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗ್ತಿದೆ. ಅನೇಕ ಸೆಲೆಬ್ರಿಟಿಗಳು ಕೊರೊನಾ ಸೋಂಕಿಗೆ ಬಲಿಯಾಗ್ತಿದ್ದಾರೆ. ಈಗ ಮತ್ತೊಬ್ಬ ನಟಿ ಕೊರೊನಾಕ್ಕೆ ಬಲಿಯಾಗಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಚಿತ್ರ ಚಿಚೋರ್ ನಲ್ಲಿ ನಟಿಸಿದ್ದ ಅಭಿಲಾಶಾ ಪಾಟೀಲ್ ಕೊರೊನಾಕ್ಕೆ ಬಲಿಯಾಗಿದ್ದಾರೆ.

ವರದಿ ಪ್ರಕಾರ, ಅಭಿಲಾಶಾ ಪಾಟೀಲ್, ವಾರಣಾಸಿಯಲ್ಲಿ ಸಿನಿಮಾ ಶೂಟಿಂಗ್ ಮಾಡ್ತಿದ್ದರು. ಶೂಟಿಂಗ್ ಮುಗಿಸಿ ಮುಂಬೈಗೆ ವಾಪಸ್ ಆದವರಿಗೆ ಕೊರೊನಾ ಕಾಣಿಸಿಕೊಂಡಿದೆ. ಆರಂಭಿಕ ರೋಗಲಕ್ಷಣ ಕಾಣಿಸಿಕೊಂಡ ನಂತ್ರ ಪರೀಕ್ಷೆ ಮಾಡಲಾಗಿತ್ತು. ಮನೆಯಲ್ಲಿಯೇ ನಟಿ ಚಿಕಿತ್ಸೆ ಪಡೆಯುತ್ತಿದ್ದರು.

ಅಭಿಲಾಶಾ ಪಾಟೀಲ್ ಅವರಿಗೆ ಇದ್ದಕ್ಕಿದ್ದಂತೆ ಉಸಿರಾಟದ ತೊಂದರೆ ಉಂಟಾಗಿದೆ. ನಂತ್ರ ಅವರನ್ನು ಐಸಿಯುಗೆ ದಾಖಲಿಸಲಾಯಿತು. ಮಂಗಳವಾರ ಅವರ ಆರೋಗ್ಯ ಹದಗೆಟ್ಟಿದ್ದು, ರಾತ್ರಿ ಸಾವನ್ನಪ್ಪಿದ್ದಾರೆ. ಅಭಿಲಾಷಾ ಅಭಿಮಾನಿಗಳು ಶೋಕ ವ್ಯಕ್ತಪಡಿಸಿದ್ದಾರೆ. ಬದ್ರಿನಾಥ್ ಕಿ ದುಲ್ಹಾನಿಯಾ, ಗುಡ್ ನ್ಯೂಸ್, ಮಲಾಲ್ ಸೇರಿದಂತೆ ಅನೇಕ ಚಿತ್ರಗಳಲ್ಲಿ ಅಭಿಲಾಷಾ ನಟಿಸಿದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ