Home / Uncategorized / ಸುವರ್ಣ ವಿಧಾನಸೌಧವನ್ನು ಕೊರೋನಾ ಕೇರ್ ಸೆಂಟರ್ ಆಗಿ ಪರಿವರ್ತಿಸಬೇಕು ಎಂದು ಶಾಸಕಿ ಅಂಜಲಿ ನಿಂಬಾಳಕರ್ B.S.Y. ಅವರಿಗೆ ಪತ್ರ

ಸುವರ್ಣ ವಿಧಾನಸೌಧವನ್ನು ಕೊರೋನಾ ಕೇರ್ ಸೆಂಟರ್ ಆಗಿ ಪರಿವರ್ತಿಸಬೇಕು ಎಂದು ಶಾಸಕಿ ಅಂಜಲಿ ನಿಂಬಾಳಕರ್ B.S.Y. ಅವರಿಗೆ ಪತ್ರ

Spread the love

ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಪ್ರತಿನಿತ್ಯ ಸೋಂಕಿತರ ಸಂಖ್ಯೆ ಸಾವಿರ ಗಡಿ ಸಮೀಪಿಸುತ್ತಿದೆ. ಇದರಲ್ಲಿ ಸೋಂಕಿಗೆ ಒಳಗಾಗಿ ಉಸಿರಾಟ ಸೇರಿ ಮತ್ತಿತರ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ. ಹೀಗಾಗಿ ಕಳೆದ ಎರಡು ವರ್ಷಗಳಿಂದ ಯಾವುದೇ ಅಧಿವೇಶನಗಳನ್ನು ನಡೆಸದೇ ವ್ಯರ್ಥವಾಗಿ ಕೋಟ್ಯಾಂತರ ರೂಪಾಯಿ ವೆಚ್ಛ ಮಾಡಿ ನಿರ್ವಹಣೆ ಮಾಡುತ್ತಿರುವ ಬೆಳಗಾವಿಯ ಸುವರ್ಣಸೌಧವನ್ನು ಇಂತಹ ಸಂದರ್ಭದಲ್ಲಿ ಸದ್ಬಳಕೆ ಮಾಡಿಕೊಳ್ಳುವುದು ಸೂಕ್ತ ಎಂದು ಅವರು ಹೇಳಿದ್ದಾರೆ.

 

 

 

 

 

 

 

 

 

 

 

ಸಾವಿರಾರು ರೋಗಿಗಳಿಗೆ ಏಕಕಾಲದಲ್ಲಿ ಚಿಕಿತ್ಸೆ ನೀಡುವಷ್ಟು ವಿಶಾಲವಾಗಿರುವ ಸುವರ್ಣಸೌಧದಲ್ಲಿ ಕೂಡಲೇ ಕೊರೊನಾ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಎಲ್ಲ ಸಲಕರಣೆಗಳನ್ನು ಅಳವಡಿಸಿ ಅಗತ್ಯ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಿ ಬೆಳಗಾವಿ ಜಿಲ್ಲೆ ಮತ್ತು ಉತ್ತರ ಕರ್ನಾಟಕ ಭಾಗದ ರೋಗಿಗಳಿಗೆ ಬೆಡ್ ಸೌಲಭ್ಯ ಕಲ್ಪಿಸಿ ಚಿಕಿತ್ಸೆ ನೀಡಬೇಕು. ಆ ಮೂಲಕ ರಾಜ್ಯ ಜನರ ತೆರಿಗೆ ಹಣದಿಂದ ನಿರ್ಮಿಸಲ್ಪಟ್ಟಿರುವ ಸುವರ್ಣ ವಿಧಾನಸೌಧವನ್ನು. ಇಂತಹ ತುರ್ತು ಪರಿಸ್ಥಿತಿಯಲ್ಲಿ ಜನರ ಜೀವ ಉಳಿಸುವ ಸಾರ್ಥಕ ಕಾರ್ಯಕ್ಕೆ ಬಳಸಿಕೊಳ್ಳಲು ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಕುಸ್ತಿ ಗ್ರಾಮೀಣ ಭಾಗದ ಬಹುದೊಡ್ಡ ಕ್ರೀಡೆ

Spread the love ರಬಕವಿ-ಬನಹಟ್ಟಿ: ಕುಸ್ತಿ ಗ್ರಾಮೀಣ ಭಾಗದ ಬಹುದೊಡ್ಡ ಕ್ರೀಡೆ. ಗ್ರಾಮೀಣ ಭಾಗದ ಜನರು ಕುಸ್ತಿಗೆ ಬಹಳಷ್ಟು ಮಹತ್ವ ನೀಡುತ್ತಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ