Breaking News

‘ಎಣ್ಣೆ’ ಪ್ರಿಯರಿಗೆ ಗುಡ್ ನ್ಯೂಸ್ : ‘ಮದ್ಯ’ ಪಾರ್ಸೆಲ್ ಕೊಂಡೊಯ್ಯಲು ರಾಜ್ಯ ಸರ್ಕಾರದಿಂದ ಅನುಮತಿ

Spread the love

ಬೆಂಗಳೂರು : ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಘೋಷಣೆಯಾಗಿದ್ದಂತ ಕೊರೋನಾ ಕರ್ಪ್ಯೂನಿಂದ ಕೊರೋನಾ ನಿಯಂತ್ರಣಗೊಂಡಿಲ್ಲ. ಹೀಗಾಗಿ ರಾಜ್ಯಾಧ್ಯಂತ ಮೇ. 10 ರಿಂದ ಮೇ. 24 ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗುತ್ತಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಅತ್ಯಂತ ಪರಿಣಾಮವಾಗಿದೆ, ಇದನ್ನು ನಿಯಂತ್ರಿಸಲು ವಿಧಿಸಲಾಗಿದ್ದಂತ ಕೊರೋನಾ ಕರ್ಪ್ಯೂ ಹೆಚ್ಚು ಪರಿಣಾಮಕಾರಿ ಆಗಿಲ್ಲ. ಹೀಗಾಗಿ ದಿನಾಂಕ 10-05-2021ರ ಬೆಳಿಗ್ಗೆ 6 ಗಂಟೆಯವರೆ 24-05-2021ರವರೆಗೆ ಬೆಳಿಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ವಿಧಿಸಲಾಗುತ್ತಿದೆ. ಈ ಅವಧಿಯಲ್ಲಿ ಅಂಗಡಿ, ಬಾರ್, ಹೋಟೆಲ್, ಪಬ್ ನಿರ್ಬಂಧಿಸಲಾಗಿದೆ ಎಂದರು.

ಇನ್ನೂ, ಮದ್ಯ ಪ್ರಿಯರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಮದ್ಯ ಪಾರ್ಸೆಲ್ ಕೊಂಡೊಯ್ಯಲು ಅವಕಾಶ ನೀಡಿದೆ, ಹೌದು, ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಅಗತ್ಯ ಸಾಮಾನು ಖರೀದಿಗೆ ಅವಕಾಶ ನೀಡಿದ್ದು, ಈ ಸಮಯದಲ್ಲಿ ಮದ್ಯ ಪ್ರಿಯರು ಎಣ್ಣೆಯನ್ನು ಮನೆಗೆ ಪಾರ್ಸೆಲ್ ಕೊಂಡೊಯ್ಯಬಹುದಾಗಿದೆ ಎಂದು ರಾಜ್ಯ ಸರ್ಕಾರದ ಮಾರ್ಗಸೂಚಿ ತಿಳಿಸಿದೆ.

ಮುಂದುವರೆದು, ಆಹಾರ, ಹಾಲು, ತರಕಾರಿ ಮಾರಾಟಕ್ಕೆ ಅನುಕೂಲುವಾಗುವಂತೆ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅನುಮತಿ ನೀಡಲಾಗಿದೆ. ಹಾಲಿನ ಅಂಗಡಿಗಳು ಸಂಜೆ 6 ಗಂಟೆಯವರೆಗೆ ತೆರೆದಿರಲು ಅವಕಾಶ ನೀಡಲಾಗಿದೆ. ತಳ್ಳೋ ಗಾಡಿಯಲ್ಲಿ ಕೂಡ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಆಸ್ಪತ್ರೆಗೆ ಹೋಗದೋದಕ್ಕೆ ಅವಕಾಶ ನೀಡಲಾಗಿದೆ. ಅಗತ್ಯ ವಸ್ತು ಕೊಂಡೊಯ್ಯೋದಕ್ಕೆ ಅವಕಾಶ ನೀಡಲಾಗಿದೆ ಎಂದರು.


Spread the love

About Laxminews 24x7

Check Also

ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌ ಮಂಡನೆ: ಸಿದ್ದರಾಮಯ್ಯ

Spread the love ಮೈಸೂರು: ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌  ಮಂಡನೆ ಮಾಡುತ್ತೇನೆ. ಅವರು ಮುಂದುವರೆಯಿರಿ ಎಂದರೆ ಮುಂದುವರೆಯುತ್ತೇನೆ. ಎಲ್ಲದೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ