Home / ರಾಜಕೀಯ / ತರಕಾರಿ ಅಂಗಡಿಯನ್ನು ಕಾಲಿನಿಂದ ಒದ್ದು ದರ್ಪ ಮೆರೆದ ಪೊಲೀಸ್ ಅಧಿಕಾರಿ : ಅಮಾನತು

ತರಕಾರಿ ಅಂಗಡಿಯನ್ನು ಕಾಲಿನಿಂದ ಒದ್ದು ದರ್ಪ ಮೆರೆದ ಪೊಲೀಸ್ ಅಧಿಕಾರಿ : ಅಮಾನತು

Spread the love

ನವದೆಹಲಿ : ಪಂಜಾಬಿನ ಫಗ್ವಾರ ಪ್ರದೇಶದ ಪೊಲೀಸ್ ಅಧಿಕಾರಿಯೊಬ್ಬ ತರಕಾರಿ ಮಾರಾಟ ಮಳಿಗೆಯನ್ನು ಕಾಲಿನಿಂದ ಜಾಡಿಸಿರುವ ಘಟನೆ ನಡೆದಿದ್ದು, ಆ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಫಗ್ವಾರ್ ಸ್ಟೇಷನ್ ಹೌಸ್ ಆಫೀಸರ್ ನವದೀಪ್ ಸಿಂಗ್ ತರಕಾರಿ ಅಂಗಡಿಯನ್ನು ಕಾಲಿನಿಂದ ಜಾಡಿಸಿ ದರ್ಪ ತೋರಿರುವ ಅಧಿಕಾರಿ. ಪೊಲೀಸ್ ಅಧಿಕಾರಿಯ ಈ ದರ್ಪದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚರ್ಚೆಗೆ ಕಾರಣವಾಗಿದೆ.

ಇನ್ನು ನವದೀಪ್ ಸಿಂಗ್ ಮೇಲೆ ಕಠಿಣ ಕ್ರಮ ಕೈಗೊಂಡಿರುವ ಪಂಜಾಬ್ ಪೊಲೀಸ್ ಡೈರೆಕ್ಟರ್ ಜನರಲ್ ದಿನಕರ್ ಗುಪ್ತ, ನವದೀಪ್ ಅವರನ್ನು ಅಮಾನತು ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ್ದು, ನಾಚಿಕೆಗೇಡು, ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ನಾನು ಫಗ್ವಾರಾ ಎಸ್‌ ಎಚ್‌ ಒ ಅವರನ್ನು ಅಮಾನತುಗೊಳಿಸಿದ್ದೇನೆ. ಅಂತಹ ಅಧಿಕಾರ ದುರುಪಯೋಗವನ್ನು ಸಹಿಸುವುದಿಲ್ಲ ಎಂದಿದ್ದಾರೆ.

ಪಂಜಾಬ್ ನಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ್ದು, ಈ ವೇಳೆ ಗಸ್ತು ತಿರುಗುತ್ತಿದ್ದ ಅಧಿಕಾರಿ ನವದೀಪ್ ತರಕಾರಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಅಂಗಡಿಯನ್ನು ಜಾಡಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಪೊಲೀಸ್ ಅಧಿಕಾರಿಯ ಮೇಲೆ ಆಕ್ರೋಶ ವ್ಯಕ್ತವಾಗಿದೆ.


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ