Breaking News

ಹಿಮಾಚಲಕ್ಕೆ ಹೋಗಲು ಬಿಗ್ ಬಿ, ಟ್ರಂಪ್ ಹೆಸರಿನಲ್ಲಿ ನಕಲಿ ಇ-ಪಾಸ್ : FIR ದಾಖಲು

Spread the love

ಶಿಮ್ಲಾ : ಹಿಮಾಚಲಕ್ಕೆ ಪ್ರವಾಸ ಕೈಗೊಳ್ಳಲು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಹೆಸರಿನಲ್ಲಿ ನಕಲಿ ಇ-ಪಾಸ್ ನೋಂದಣಿ ಮಾಡಲಾಗಿದ್ದು, ಆರೋಪಿ ವಿರುದ್ಧ FIR ದಾಖಲಾಗಿದೆ.

ಹಿಮಾಚಲ ಪ್ರದೇಶ ಸರ್ಕಾರವು ಕೋವಿಡ್ ಸಮಯದಲ್ಲಿ ಪ್ರವಾಸ ಕೈಗೊಳ್ಳುವ ಪ್ರವಾಸಿಗರಿಗೆ ಇ-ಪಾಸ್ ಕಡ್ಡಾಯ ಮಾಡಿದೆ. ಈ ವೇಳೆ ಇಬ್ಬರು ಖ್ಯಾತ ನಾಮರ ಹೆಸರುಗಳನ್ನು ಬಳಿಸಿಕೊಂಡು, ಈ ಇಬ್ಬರು ಚತ್ತೀಸ್ ಗಡದಿಂದ ಶಿಲ್ಲಾಕ್ಕೆ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದು ಇ-ಪಾಸ್ ನೋಂದಣಿ ಮಾಡಲಾಗಿದೆ. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿದ್ದು ಟ್ರೋಲ್ ಆಗುತ್ತಿದೆ.

ಶುಕ್ರವಾರ ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಎರಡೂ ಈ ಪಾಸ್ ನೋಂದಣಿ ವೇಳೆ ಒಂದೇ ಮೊಬೈಲ್ ನಂಬರ್ ಮತ್ತು ಒಂದೇ ಆಧಾರ್ ಕಾರ್ಡ್ ನಂಬರ್ ಅನ್ನು ನೋಂದಾಯಿಸಲಾಗಿದೆ.

ಹಿಮಾಚಲ ಪ್ರದೇಶದ ಮಾಹಿತಿ ತಂತ್ರಜ್ಞಾನ ಇಲಾಖೆ ನೀಡಿದ ದೂರಿನ ಆಧಾರದ ಮೇಲೆ ಶಿಮ್ಲಾ ಪೂರ್ವ ಪೊಲೀಸ್ ಠಾಣೆಯಲ್ಲಿ ಎಫ್‌ ಐ ಆರ್ ದಾಖಲಿಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ತಪ್ಪು ಮಾಹಿತಿ ಹರಡುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಅನ್ವಯ FIR ದಾಖಲಾಗಿದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ