Breaking News

ಲಾರಿ ಚಾಲನೆ ವೇಳೆ ನಿದ್ರೆ: ಅಪಘಾತದಲ್ಲಿ ಚಾಲಕ ಚಿರನಿದ್ರೆಗೆ

Spread the love

ಪಾಂಡವಪುರ: ಮರಕ್ಕೆ ಲಾರಿ ಡಿಕ್ಕಿ ಹೊಡೆದು ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೆನ್ನಾಳು ಗ್ರಾಮದ ಗೇಟ್ ಬಳಿ ನಡೆದಿದೆ.

ತಮಿಳುನಾಡು ರಾಜ್ಯದ ನಿವಾಸಿ, ಲಾರಿ ಚಾಲಕ ಕರಪಸ್ವಾಮಿ (26) ಮೃತ ವ್ಯಕ್ತಿ.

ಕಳೆದ ರಾತ್ರಿ 12 ಗಂಟೆ ಸಮಯದಲ್ಲಿ ನಾಗಮಂಗಲ ಮಾರ್ಗದಿಂದ ತಮಿಳುನಾಡು ರಾಜ್ಯಕ್ಕೆ ಲಾರಿಯಲ್ಲಿ ತೆಂಗಿನ ಚಗರೆಯನ್ನು ತುಂಬಿಕೊಂಡು ತೆರಳುತ್ತಿದ್ದಾಗ ತಾಲ್ಲೂಕಿನ ಕೆನ್ನಾಳು ಗೇಟ್ ಬಳಿ ಚಾಲಕ ಕರಪಸ್ವಾಮಿ ನಿದ್ರೆಗೆ ಜಾರಿದಾಗ ಲಾರಿ ಮರಕ್ಕೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

ಅಪಘಾತವಾದ ಲಾರಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಸರ್ಕಲ್ ಇನ್ಸ್‌ಪೆಕ್ಟರ್ ಕೆ.ಪ್ರಭಾಕರ್ ಭೇಟಿ ನೀಡಿ ಪರಿಶೀಲಿಸಿ, ಪಾಂಡವಪುರ ಸರ್ಕಾರಿ ಆಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಸಿ, ವಾರಸುದಾರರಿಗೆ ಶವವನ್ನು ಹಸ್ತಾಂತರಿಸಿದರು. ಈ ಘಟನೆಗೆ ಸಂಬಂಧಪಟ್ಟಂತೆ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


Spread the love

About Laxminews 24x7

Check Also

ರಮೇಶ್ ಜಾರಕಿಹೊಳಿ ಅವರಿಂದ ಇಂಗ್ಲೆಂಡ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ.

Spread the love ರಮೇಶ್ ಜಾರಕಿಹೊಳಿ ಅವರಿಂದ ಇಂಗ್ಲೆಂಡ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ. ವಿದೇಶ ಪ್ರವಾಸದಲ್ಲಿರುವ ಜನನಾಯಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ